HEALTH TIPS

ಉದಯಗಿರಿ ಶಾಲೆಯಲ್ಲಿ ಪರಿಸರ ಮಾಹಿತಿ

ಬದಿಯಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಕಾಸರಗೋಡು, ಬದಿಯಡ್ಕ ವಲಯದ ಶ್ರೀ ಶಂಕರನಾರಾಯಣ ಕಿರಿಯ ಪ್ರಾಥಮಿಕ ಶಾಲೆ ಉದಯಗಿರಿಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಉಷಾ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಸ್ಥಾಯಿಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ ಗಿಡನೆಡುವ ಮೂಲಕ ಉದ್ಘಾಟಿಸಿ ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ತಿಳಿಸಿದರು. ತಾಲೂಕು ಕೃಷಿ ಮೇಲ್ವಿಚಾರಕ ರಮೇಶ್ ಪರಿಸರ ಉಳಿಸಿ ಬೆಳೆಸುವಲ್ಲಿ ನಮ್ಮೆಲ್ಲರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀಧರ್ ಭಟ್, ವಲಯ ಮೇಲ್ವಿಚಾರಕಿ ಸುಗುಣ ಓ ಹವಾಲ್ದಾರ್, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಸೇವಾಪ್ರತಿನಿಧಿ  ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.  ಶಿಕ್ಷಕಿ ಗೀತಾ ಮಾಲಿನಿ ಸ್ವಾಗತಿಸಿ, ಪವಿತ್ರ ವಂದಿಸಿದರು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries