ಕುಂಬಳೆ: ಕುಂಬಳೆ ಸನಿಹದ ಕಾನ ಪೆÇಟ್ಟೋಳ ನಿವಾಸಿ, ಪ್ರಗತಿಪರ ಕೃಷಿಕ ಸುಬ್ರಹ್ಮಣ್ಯ ಭಟ್ (87) ಶನಿವಾರ ನಿಧನರಾದರು. ವಯೋಸಹಜ ಅಸೌಖ್ಯದಿಂದ ಬಳಲುತ್ತಿದ್ದರು.
ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು ಜನಸಂಘದ ಕಾಲದಿಂದಲೇ ಸಂಘಟನಾ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇವರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


