HEALTH TIPS

ಭೋಜಶಾಲಾ ಸಮೀಪ ನಮಾಜ್ ಮಾಡಲು ಜಾಗ ನೀಡಿ: ಸುಪ್ರೀಂ ಕೋರ್ಟ್ ಆದೇಶ

 ನವದೆಹಲಿ: ವಿವಾದಿತ ಭೋಜಶಾಲಾ ಸ್ಥಳಕ್ಕೆ ಹೊಂದಿಕೊಂಡಂತೆ ನಮಾಜ್ ಮಾಡಲು ಮುಸ್ಲಿಮರಿಗೆ ಮಧ್ಯಾಹ್ನ 1 ಗಂಟೆಯಿಂದ 3ರವರೆಗೆ ಸ್ಥಳಾವಕಾಶ ಕಲ್ಪಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.


ಮುಸ್ಲಿಮರಿಗೆ ಸಂಬಂಧಿಸಿದ ಈ ವ್ಯವಸ್ಥೆಯು , ಅರ್ಜಿಗಳ ಅಂತಿಮ ತೀರ್ಪಿಗೆ ಒಳಪಟ್ಟು ತಾತ್ಕಾಲಿಕವಾಗಿರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲಾ ಬಾಗ್ಚಿ ಮತ್ತು ವಿ ಮೋಹನ ಅವರನ್ನೊಳಗೊಂಡ ಪೀಠ ಸ್ಪಷ್ಟಪಡಿಸಿದೆ.

ಅಲ್ಲದೇ, ತನ್ನ ಅನುಮತಿ ಇಲ್ಲದೆ ಸ್ಥಳದಲ್ಲಿ ಯಾವುದೇ ರಚನಾತ್ಮಕ ಬದಲಾವಣೆಗಳನ್ನು ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ನಿರ್ದೇಶಿಸಿದೆ.

ಭೋಜಶಾಲಾ ಒಂದು ಸೂಕ್ಷ್ಮ ವಿಷಯವಾಗಿದ್ದು, ತಾಳ್ಮೆ ವಹಿಸುವಂತೆ ಹಿಂದೂ ಮತ್ತು ಮುಸ್ಲಿಂ ಪರ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿದೆ. ವಿವಾದ ಬಗೆಹರಿಸಲು ನಿತ್ಯವೂ ಪ್ರಕರಣದ ವಿಚಾರಣೆ ನಡೆಸಲು ಸಿದ್ಧವಿರುವುದಾಗಿ ಪೀಠ ಹೇಳಿದೆ.

ಮಧ್ಯ ಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಸಂಕೀರ್ಣವು ಸರಸ್ವತಿಯ ದೇವಾಲಯವಾಗಿದೆ ಎಂದು ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದ ಪ್ರತಿ ಅಭಿವ್ಯಕ್ತಿಯನ್ನು ಸೂಕ್ಷ್ಮವಾಗಿ ಮಾಡುತ್ತಿರುವುದಾಗಿ ನ್ಯಾಯಾಲಯ ಹೇಳಿದೆ.

'ಇವುಗಳು ಬಹಳ ಸೂಕ್ಷ್ಮ ವಿಚಾರವಾಗಿದ್ದು, ನ್ಯಾಯಾಲಯದಲ್ಲಿ ನೀಡುವ ಹೇಳಿಕೆಗಳು ಅನಗತ್ಯ ವಿವಾದ ಸೃಷ್ಟಿಸುತ್ತವೆ ಅಥವಾ ತಪ್ಪು ಸಂದೇಶ ನೀಡುತ್ತವೆ. ಪ್ರತಿಯೊಂದು ಅಭಿವ್ಯಕ್ತಿ ಬಗ್ಗೆಯೂ ನಾವು ಬಹಳ ಜಾಗರೂಕರಾಗಿರಬೇಕು' ಎಂದಿದ್ದಾರೆ.

'ಈ ಪ್ರಕರಣದಲ್ಲಿ ಮಧ್ಯಂತರ ಪರಿಹಾರ ಕೋರಿ ಇದೇ ಮೊದಲ ಬಾರಿಗೆ ಅರ್ಜಿ ತಮ್ಮ ಬಳಿಗೆ ಬಂದಿದೆ. ಹೈಕೋರ್ಟ್ ಆದೇಶ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರದ ಅಸಹಾಯಕತೆಯನ್ನು ಪರಿಗಣಿಸಲಾಗಿದೆ. 10, 15 ದಿನಗಳಲ್ಲಿ ಈ ವಿಷಯವನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು' ಎಂದಿದ್ದಾರೆ.

ಸೋಮವಾರದಂದು ಮುಸ್ಲಿಂ ಮೇಲ್ಮನವಿದಾರರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಹುಜೆಫಾ ಅಹ್ಮದಿ ಮತ್ತು ವಕೀಲ ನಿಜಾಮ್ ಪಾಷಾ ಅವರು ಅರ್ಜಿಗಳನ್ನು ತುರ್ತು ಆಧಾರದ ಮೇಲೆ ವಿಚಾರಣೆ ನಡೆಸಬೇಕೆಂದು ಪೀಠವನ್ನು ಒತ್ತಾಯಿಸಿದ್ದರು.

ಧಾರ್ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಸರಸ್ವತಿ ದೇವಿಗೆ ಅರ್ಪಿತವಾದ ದೇವಾಲಯವಾಗಿದೆ ಎಂದು ತೀರ್ಪು ಮೇ 15 ರಂದು ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿತ್ತು.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries