ಕಾಸರಗೋಡು: ಜಿಲ್ಲೆಯಲ್ಲಿ ಮಳೆ ಬಿರುಸುಪಡೆದುಕೊಂಡಿದ್ದು, ಮುಂದಿನ ಐದು ದಿನಗಳ ಕಾಲ ಕೇಂದ್ರ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯನ್ವಯ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
ಜುಲೈ 30ರ ವರೆಗೆ ಕಾಸರಗೋಡು ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ಘೋಷಿಸಲಾಗಿದ್ದು, ಈ ಕಾಳಾವಧಿಯಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆ ಬಗ್ಗೆ
ಮುನ್ಸೂಚನೆ ನೀಡಲಾಗಿದೆ. ಈ ಕಾಲಾವಧಿಯಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗಿನ ಮಳೆಯಾಗುವ ಸಾಧ್ಯತೆಯಿದೆ ಎಂದೂ ಸೂಚಿಸಲಾಘಿದೆ.
ಕಾಸರಗೋಡಿನಲ್ಲಿ ಬಿರುಸಿನ ಮಳೆ:
ಸೋಮವಾರ ಕಾಸರಗೋಡು ನಗರದಲ್ಲಿ ಬಿರುಸಿನ ಮಳೆಯಾಗಿದೆ. ನಗರದ ವಿವಿಧೆಡೆ ಒಳಚರಂಡಿ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ಕಾಸರಗೋಡು ಹಳೇ ಪ್ರೆಸ್ಕ್ಲಬ್ ಜಂಕ್ಷನ್ ವಠಾರದಲ್ಲಿ ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದು, ವಾಹನಸಂಚಾರದೊಂದಿಗೆ ಪಾದಚಾರಿಗಳಿಗೆ ಸಂಚರಿಸಲೂ ಸಮಸ್ಯೆ ಎದುರಾಗಿತ್ತು. ನಗರದ ಬಹುತೇಕ ರಸ್ತೆಗಳ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ.

