HEALTH TIPS

ಜಿಲ್ಲೆಯಲ್ಲಿ ಮತ್ತೆ ಬಿರುಸುಗೊಂಡ ಮಳೆ-ಯೆಲ್ಲೋ ಅಲರ್ಟ್

ಕಾಸರಗೋಡು: ಜಿಲ್ಲೆಯಲ್ಲಿ ಮಳೆ ಬಿರುಸುಪಡೆದುಕೊಂಡಿದ್ದು, ಮುಂದಿನ ಐದು ದಿನಗಳ ಕಾಲ ಕೇಂದ್ರ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯನ್ವಯ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. 


ಜುಲೈ 30ರ ವರೆಗೆ  ಕಾಸರಗೋಡು ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ಘೋಷಿಸಲಾಗಿದ್ದು, ಈ ಕಾಳಾವಧಿಯಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆ ಬಗ್ಗೆ 

ಮುನ್ಸೂಚನೆ ನೀಡಲಾಗಿದೆ. ಈ ಕಾಲಾವಧಿಯಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗಿನ ಮಳೆಯಾಗುವ ಸಾಧ್ಯತೆಯಿದೆ ಎಂದೂ ಸೂಚಿಸಲಾಘಿದೆ.

ಕಾಸರಗೋಡಿನಲ್ಲಿ ಬಿರುಸಿನ ಮಳೆ:

ಸೋಮವಾರ ಕಾಸರಗೋಡು ನಗರದಲ್ಲಿ ಬಿರುಸಿನ ಮಳೆಯಾಗಿದೆ. ನಗರದ ವಿವಿಧೆಡೆ ಒಳಚರಂಡಿ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ಕಾಸರಗೋಡು ಹಳೇ ಪ್ರೆಸ್‍ಕ್ಲಬ್ ಜಂಕ್ಷನ್ ವಠಾರದಲ್ಲಿ ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದು, ವಾಹನಸಂಚಾರದೊಂದಿಗೆ ಪಾದಚಾರಿಗಳಿಗೆ ಸಂಚರಿಸಲೂ ಸಮಸ್ಯೆ ಎದುರಾಗಿತ್ತು. ನಗರದ ಬಹುತೇಕ ರಸ್ತೆಗಳ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries