ಮಂಜೇಶ್ವರ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆಭಾಜನರಾದ ರೂಪಶ್ರೀ ವರ್ಕಾಡಿ ಅವರಿಗೆ ಭಾರತೀಯ ಜನತಾ ಪಾರ್ಟಿ, ವರ್ಕಾಡಿ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಬಗ್ಗೆ ನಡೆದ ಸಮಾರಂಭದಲ್ಲಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಮಣಿಕಂಠ ರೈ ಪಟ್ಲ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ ನಾರಂಪಾಡಿ, ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಯತೀರಾಜ್ ಶೆಟ್ಟಿ, ವರ್ಕಾಡಿ ಗ್ರಾಮ ಪಂಚಾಯಿತಿ ಸದಸ್ಯೆ ತುಳಸಿ ಕುಮಾರಿ, ವರ್ಕಾಡಿ ಬಿಜೆಪಿ ಸಮಿತಿ ಅಧ್ಯಕ್ಷ ಭಾಸ್ಕರ್ ಪೆÇಯ್ಯೇ, ಪ್ರಧಾನ ಕಾರ್ಯದರ್ಶಿಗಳಾದ ನಾಗೇಶ್ ಬಳ್ಳೂರ್ ಹಾಗೂ ಕೃಷ್ಣಮೂರ್ತಿ ನೂಜಿ, ಮುಖಂಡರಾದ ರಕ್ಷಣ್ ಅಡೆಕಳಕಟ್ಟೆ, ಪ್ರಶಾಂತ್, ರವಿರಾಜ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.


