HEALTH TIPS

ರಾಮಮಂದಿರ ದೇಣಿಗೆ ಕಳವು: ಚಂಪತ್‌ ರಾಯ್‌, ಅನಿಲ್‌ ಮಿಶ್ರಾ ರಾಜೀನಾಮೆ ಅಂಗೀಕಾರ

ಅಯೋಧ್ಯಾ: ರಾಮ ಮಂದಿರ ದೇಣಿಗೆ ಕಳವು ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ವಿವಾದದ ಕೇಂದ್ರಬಿಂದುವಾಗಿದ್ದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್‌ ಮತ್ತು ಟ್ರಸ್ಟಿ ಅನಿಲ್‌ ಮಿಶ್ರಾ ಅವರ ರಾಜೀನಾಮೆಯನ್ನು ಟ್ರಸ್ಟ್ ಅಂಗೀಕರಿಸಿದೆ.

ಈ ಬಗ್ಗೆ 'ಎನ್‌ಡಿಟಿವಿ' ವರದಿ ಮಾಡಿದೆ.

ದೇಣಿಗೆ ಕಳವು ಆರೋಪಗಳು ಕೇಳಿಬಂದ ನಂತರ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಹಾಗೂ ಟ್ರಸ್ಟಿ ಅನಿಲ್‌ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಸದ್ಯಕ್ಕೆ ರಾಯ್‌ ಅವರ ರಾಜೀನಾಮೆ ಅಂಗೀಕಾರವಾಗಿದ್ದರೂ, ಅವರು ಟ್ರಸ್ಟಿಯಾಗಿ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರೇಸ್‌ನಲ್ಲಿ ಬಜರಂಗ ಬಾಗ್ಡಾ?

ಚಂಪತ್ ರಾಯ್‌ ನಿರ್ಗಮನದ ನಂತರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವಿಶ್ವ ಹಿಂದೂ ಪರಿಷತ್‌ನ ಜಾಗತಿಕ ಪ್ರಧಾನ ಕಾರ್ಯದರ್ಶಿ ಬಜರಂಗ ಬಾಗ್ಡಾ ಅವರ ಹೆಸರು ಮುಂಚೂಣಿಯಲ್ಲಿದೆ.

3 ಗಂಟೆಗೂ ಹೆಚ್ಚು ಕಾಲ ನಡೆದ ಸಭೆ

ದೇಗುಲದ ಸಂಕೀರ್ಣದೊಳಗಿನ ಅತಿಥಿ ಗೃಹದಲ್ಲಿ ಮಧ್ಯಾಹ್ನ 3.15ಕ್ಕೆ ಆರಂಭವಾದ ಸಭೆ ಸಂಜೆ ಸುಮಾರು 6.30ರ ಸುಮಾರಿಗೆ ಮುಕ್ತಾಯಗೊಂಡಿತು.

ಚರ್ಚೆಯಾದ ಪ್ರಮುಖ ವಿಷಯಗಳು

ಟ್ರಸ್ಟ್‌ನ ಒಟ್ಟು 9 ಖಾಯಂ ಸದಸ್ಯರ ಪೈಕಿ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಸೇರಿದಂತೆ 7 ಸದಸ್ಯರು ಸಭೆಯಲ್ಲಿ ಖುದ್ದಾಗಿ ಹಾಜರಿದ್ದರು. ಆದರೆ, ಆರೋಪ ಎದುರಿಸುತ್ತಿರುವ ಚಂಪತ್ ರಾಯ್‌ ಮತ್ತು ಅನಿಲ್ ಮಿಶ್ರಾ ಸಭೆಗೆ ಗೈರಾಗಿದ್ದರು.

ಚಂಪತ್ ರಾಯ್‌ ಮತ್ತು ಅನಿಲ್ ಮಿಶ್ರಾ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸುವ ಮತ್ತು ಅದರಿಂದ ತೆರವಾಗುವ ಪ್ರಮುಖ ಹುದ್ದೆಗಳಿಗೆ ಹೊಸಬರನ್ನು ನೇಮಕ ಮಾಡುವ ಕುರಿತು ಸುದೀರ್ಘ ಸಮಾಲೋಚನೆ ನಡೆಸಲಾಗಿದೆ.

ದೇಣಿಗೆ ಕಳವು ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿಯ ಮಧ್ಯಂತರ ವರದಿ ಮತ್ತು ಸಿಸಿಟಿವಿ ಸಾಕ್ಷ್ಯಗಳ ಕುರಿತು ಪರಾಮರ್ಶೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries