HEALTH TIPS

ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆ

 ಕೋಲ್ಕತ್ತ: ಪಶ್ಚಿಮ ಬಂಗಾಳ ಸರ್ಕಾರದ ಎಲ್ಲಾ ಆಡಳಿತಾತ್ಮಕ ಮತ್ತು ಅಧಿಕೃತ ಸಂವಹನವನ್ನು ಸೆಪ್ಟೆಂಬರ್ 1ರಿಂದ ಬಂಗಾಳಿ ಭಾಷೆಯಲ್ಲೇ ಕಡ್ಡಾಯವಾಗಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. 


ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುವೇಂದು, ರಾಜ್ಯ ಆಡಳಿತದ ಪ್ರತಿಯೊಂದು ಹಂತದಲ್ಲೂ ಬಂಗಾಳಿ ಭಾಷೆಯ ಬಳಕೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮಗೆ ಪತ್ರದ ಮೂಲಕ ಮನವಿ ಮಾಡಿದ್ದರು ಎಂಬ ವಿಷಯವನ್ನು ಹಂಚಿಕೊಂಡರು.

2026 ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಬಂಗಾಳಿ ಭಾಷೆಯ ಬಳಕೆ ಕಡ್ಡಾಯವಾಗಲಿದೆ.

ಕೇಂದ್ರ ಸರ್ಕಾರಹಾಗೂ ಇತರ ರಾಜ್ಯಗಳೊಂದಿಗೆ ನಡೆಸುವ ಪತ್ರ ವ್ಯವಹಾರಗಳಿಗೂ ಬಂಗಾಳಿಯನ್ನು ಬಳಸಲಾಗುವುದು. ಆದರೆ, ಕೇಂದ್ರ ಸರ್ಕಾರದೊಂದಿಗಿನ ಸಂವಹನ ಬಂಗಾಳಿಯ ಜೊತೆಗೆ ಹಿಂದಿ ಭಾಷೆಯನ್ನೂ ಬಳಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಅಮಿತ್ ಶಾ ಪತ್ರದ ಹಿನ್ನೆಲೆ

ಇತ್ತೀಚಿನ ಮೂರು ದಿನಗಳ ಪಶ್ಚಿಮ ಬಂಗಾಳ ಪ್ರವಾಸದ ಅವಧಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ಬಂಗಾಳಿ ಭಾಷೆಯಲ್ಲೇ ಪತ್ರ ಬರೆದಿದ್ದರು. ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ಯಾಮ ಪ್ರಸಾದ್ ಮುಖರ್ಜಿ ಅವರು ದೇಶದ ಆಡಳಿತ, ಶಿಕ್ಷಣ ಮತ್ತು ಸಾರ್ವಜನಿಕ ಜೀವನದಲ್ಲಿ ಭಾರತೀಯ ಭಾಷೆಗಳಿಗೆ ಸೂಕ್ತ ಸ್ಥಾನಮಾನ ಸಿಗಬೇಕೆಂದು ಬಲವಾಗಿ ಪ್ರತಿಪಾದಿಸಿದ್ದರು ಎಂಬುದನ್ನು ಶಾ ತಮ್ಮ ಪತ್ರದಲ್ಲಿ ಸ್ಮರಿಸಿದ್ದರು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries