ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕ ಅಭಿಜಿತ್ ದೀಪ್ಕೆ ಅವರು ಉಪವಾಸ ಸತ್ಯಾಗ್ರಹವನ್ನು ಸೋಮವಾರ ಅಂತ್ಯಗೊಳಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ, ಜಂತರ್ ಮಂತರ್‌ನಲ್ಲಿ ಜೂನ್ 20ರಿಂದ ಪ್ರತಿಭಟನೆ ನಡೆಸುತ್ತಿದೆ.
ಇಂದು ಪಕ್ಷದ ವತಿಯಿಂದ 'ಸಂಸತ್ ಚಲೊ' ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಇದೇ ದಿನ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದ್ದು, ಸಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. 'ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಜೆ.ಪಿ.ನಡ್ಡಾ ಅವರು ನಮ್ಮ ಅಹವಾಲುಗಳನ್ನು ಆಲಿಸಲಿದ್ದಾರೆ' ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ಹೇಳಿದ್ದರು.
ಇದರ ಬೆನ್ನಲ್ಲೇ, 'ಅಭಿಜಿತ್ ದೀಪ್ಕೆ ಜಂತರ್ ಮಂತರ್‌ನಲ್ಲಿ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ. ಜೈ ಹೋ..' ಎಂದು ಎಕ್ಸ್‌ನಲ್ಲಿರುವ 'ಅoಛಿಞಡಿoಚಿಛಿh ಎಚಿಟಿಣಚಿ Pಚಿಡಿಣಥಿ' ಹ್ಯಾಂಡಲ್‌ನಲ್ಲಿ ತಿಳಿಸಲಾಗಿದೆ. ಅವರು ಪಾನೀಯ ಸೇವಿಸುತ್ತಿರುವ ವಿಡಿಯೊವನ್ನೂ ಹಂಚಿಕೊಳ್ಳಲಾಗಿದೆ.
ವಾಂಗ್ಚೂಕ್ ಆಸ್ಪತ್ರೆಗೆ; ಉಪವಾಸ ಆರಂಭಿಸಿದ 'ಕಾಕ್ರೋಚ್' ನಾಯಕ ದೀಪ್ಕೆವಾಂಗ್ಚೂಕ್ ಆಸ್ಪತ್ರೆಗೆ: ಜಂತರ್ ಮಂತರ್‌ನಲ್ಲೇ ಉಳಿದ ಉಪವಾಸ ನಿರತ ವಿದ್ಯಾರ್ಥಿಗಳು
ಸಿಜೆಪಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ ಸೊನಮ್ ವಾಂಗ್ಚೂಕ್ ಜೂನ್ 28ರಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಸತತ 21 ದಿನ ಉಪವಾಸವಿದ್ದ ಅವರ ಆರೋಗ್ಯ ಹದಗೆಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದ ದೆಹಲಿ ಹೈಕೋರ್ಟ್, ನಿಯಮಿತವಾಗಿ ಮೇಲ್ವಿಚಾರಣೆ ಮಾಡುವಂತೆ ಮತ್ತು ಅಗತ್ಯವಿದ್ದರೆ ವೈದ್ಯಕೀಯ ನೆರವು ನೀಡುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸೂಚಿಸಿತ್ತು.
ಅದರಂತೆ, ಜುಲೈ 18ರಂದು ಪ್ರತಿಭಟನಾ ಸ್ಥಳಕ್ಕೆ ಮಫ್ತಿಯಲ್ಲಿ ಬಂದ ದೆಹಲಿ ಪೊಲೀಸರು, ವಾಂಗ್ಚೂಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಇದರಿಂದ ಕೆರಳಿದ ದೀಪ್ಕೆ, ಅನಿರ್ದಿಷ್ಟಾವಧಿಯವರೆಗೆ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದ್ದರು.

