HEALTH TIPS

ಛತ್ತೀಸ್‌ಗಡ | ಮಾವೋವಾದಿಗಳು ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರ, ಚಿನ್ನ, ನಗದು ವಶ : ಶರಣಾಗತ ನಕ್ಸಲರಿಂದ ಮಾಹಿತಿ ಪಡೆದಿದ್ದ ಪೊಲೀಸರು

 ರಾಯಪುರ: ಛತ್ತೀಸಗಢದ ದಂತೇವಾಡ ಪೊಲೀಸರು ಮತ್ತು ಭದ್ರತಾ ಪಡೆಗಳು ರವಿವಾರ ರಾಯಪುರದಿಂದ ದಕ್ಷಿಣಕ್ಕೆ ಸುಮಾರು 450 ಕಿಮೀ ದೂರದಲ್ಲಿರುವ ಕಾಡಿನಲ್ಲಿ ಬಚ್ಚಿಟ್ಟಿದ್ದ ಮಾವೋವಾದಿಗಳ ಬೃಹತ್ ದಾಸ್ತಾನನ್ನು ಪತ್ತೆಹಚ್ಚಿದ್ದಾರೆ.


ಇತ್ತೀಚೆಗೆ ಶರಣಾದ ಮಾವೋವಾದಿಗಳು ನೀಡಿದ ನಿಖರವಾದ ಮಾಹಿತಿ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಜಂಟಿ ಪಡೆಗಳು, ಬಾರ್ಸೂರ್ ಪೊಲೀಸ್ ಠಾಣಾ ವ್ಯಾಪ್ತಿಯ ತೋರ್ಮಾ ಗ್ರಾಮದ ದಟ್ಟಾರಣ್ಯದಲ್ಲಿ ನೆಲದಡಿ ಬಚ್ಚಿಡಲಾಗಿದ್ದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು, ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡಿವೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 18 ಲಕ್ಷ ರೂ. ಆಗಿದ್ದು, ಇದರಲ್ಲಿ ಸುಮಾರು 16 ಲಕ್ಷ ರೂ.ಮೌಲ್ಯದ 116 ಗ್ರಾಂ ಚಿನ್ನ ಮತ್ತು 2,00,000 ರೂ. ನಗದು ಸೇರಿದೆ. ಇದರೊಂದಿಗೆ ವಿವಿಧ ರೀತಿಯ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಮುಂದಿನ ದಿನಗಳಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಹೊಂಚುದಾಳಿ ನಡೆಸಲು ಮತ್ತು ಈ ಪ್ರದೇಶದಲ್ಲಿ ತಮ್ಮ ಕಾನೂನುಬಾಹಿರ ಚಟುವಟಿಕೆಗಳನ್ನು ಮುಂದುವರಿಸಲು ಮಾವೋವಾದಿಗಳು ಇವುಗಳನ್ನು ವಿವಿಧ ಸ್ಥಳಗಳಲ್ಲಿ ಹೂತುಹಾಕಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದರು. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries