HEALTH TIPS

ಮಂಗಳೂರು | ನಾಗುರಿಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು

ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು, ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ.
ಅವಘಡ ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಒಟ್ಟು ಆರು ಮಂದಿ ಇದ್ದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಪೂರ್ಣಗೊಳಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಅವಶೇಷಗಳಡಿ ಸಿಲುಕಿಕೊಂಡಿದ್ದ ಅಲ್ಕಾ (14), ಅನುಷಾ (11) ಹಾಗೂ ಬಾಲಕೃಷ್ಣ (48) ಅವರನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವಶೇಷಗಳಡಿ ಸಿಲುಕಿದ್ದ ಶಾಂತ (46), ಅನಾಮಿಕ ಚೌರಾಸಿಯಾ (8) ಹಾಗೂ ಪರಿ (4) ಅವರನ್ನು ಹೊರತೆಗೆದಾಗ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.

ಮೂಲತಃ ಬಿಹಾರ ರಾಜ್ಯದವರಾದ ಬಾಲಕೃಷ್ಣ ಅವರ ಕುಟುಂಬ ಕಳೆದ 20 ವರ್ಷಗಳಿಂದ ಕಂಕನಾಡಿ ಗ್ರಾಮದ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ಪ್ರದೇಶದಲ್ಲಿ ವಾಸಿಸುತ್ತಿತ್ತು ಎಂದು ತಿಳಿದುಬಂದಿದೆ.

ಜಿಲ್ಲಾಧಿಕಾರಿ ದರ್ಶನ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries