ಅವಘಡ ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಒಟ್ಟು ಆರು ಮಂದಿ ಇದ್ದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಪೂರ್ಣಗೊಳಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ಅವಶೇಷಗಳಡಿ ಸಿಲುಕಿಕೊಂಡಿದ್ದ ಅಲ್ಕಾ (14), ಅನುಷಾ (11) ಹಾಗೂ ಬಾಲಕೃಷ್ಣ (48) ಅವರನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವಶೇಷಗಳಡಿ ಸಿಲುಕಿದ್ದ ಶಾಂತ (46), ಅನಾಮಿಕ ಚೌರಾಸಿಯಾ (8) ಹಾಗೂ ಪರಿ (4) ಅವರನ್ನು ಹೊರತೆಗೆದಾಗ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.
ಮೂಲತಃ ಬಿಹಾರ ರಾಜ್ಯದವರಾದ ಬಾಲಕೃಷ್ಣ ಅವರ ಕುಟುಂಬ ಕಳೆದ 20 ವರ್ಷಗಳಿಂದ ಕಂಕನಾಡಿ ಗ್ರಾಮದ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ಪ್ರದೇಶದಲ್ಲಿ ವಾಸಿಸುತ್ತಿತ್ತು ಎಂದು ತಿಳಿದುಬಂದಿದೆ.
ಜಿಲ್ಲಾಧಿಕಾರಿ ದರ್ಶನ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

