HEALTH TIPS

ಭಾರೀ ಮಳೆಗೆ ದಿಲ್ಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

 ನವದೆಹಲಿ: ಭಾರೀ ಮಳೆಯ ನಡುವೆ ದಿಲ್ಲಿಯ ರೋಹಿಣಿ ಸೆಕ್ಟರ್-16ರಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡವು ಬುಧವಾರ ಸಂಜೆ ಕುಸಿದು ಬಿದ್ದಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ದಳ ಹಾಗೂ ಇತರ ತುರ್ತು ಸೇವೆಗಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. 


ಸಂಜೆ 4.20ರ ಸುಮಾರಿಗೆ ಕಟ್ಟಡ ಕುಸಿದಿರುವ ಬಗ್ಗೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ಲಭಿಸಿತು. ಕೂಡಲೇ ನಾಲ್ಕು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಪೊಲೀಸರು, ಓಆಖಈ ಹಾಗೂ ಇತರ ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದವು.

ರಕ್ಷಣಾ ಕಾರ್ಯಾಚರಣೆಯ ವೇಳೆ ಅವಶೇಷಗಳಡಿ ಸಿಲುಕಿದ್ದ ಇಬ್ಬರನ್ನು ಸುರಕ್ಷಿತವಾಗಿ ಹೊರತೆಗೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡ ಕುಸಿದಾಗ ಭಾರೀ ಸದ್ದು ಕೇಳಿಬಂದಿದ್ದು, ಅದನ್ನು ಕೇಳಿ ಸ್ಥಳೀಯ ನಿವಾಸಿಗಳು ಘಟನಾ ಸ್ಥಳಕ್ಕೆ ಧಾವಿಸಿದರು. ಅವಶೇಷಗಳಡಿ ಸಿಲುಕಿದ್ದವರ ಸಹಾಯದ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಅವರು ತಮ್ಮ ಬರಿ ಕೈಗಳಿಂದಲೇ ಮುರಿದ ಇಟ್ಟಿಗೆಗಳು, ಕಾಂಕ್ರೀಟ್ ಚಪ್ಪಡಿಗಳು ಹಾಗೂ ತಿರುಚಿಕೊಂಡಿದ್ದ ಕಬ್ಬಿಣದ ರಾಡ್‌ಗಳನ್ನು ತೆರವುಗೊಳಿಸಿ ರಕ್ಷಣಾ ಕಾರ್ಯಕ್ಕೆ ನೆರವಾದರು.

ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ತಂಡಗಳು ಶೋಧ ಕಾರ್ಯವನ್ನು ತೀವ್ರಗೊಳಿಸಿವೆ ಎಂದು ತಿಳಿದು ಬಂದಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries