HEALTH TIPS

E20 ಪೆಟ್ರೋಲ್ ವಿವಾದ : ಪ್ರಧಾನಿ ಮೋದಿ ಭೇಟಿಗೆ ಸಮಯಾವಕಾಶ ಕೋರಿದ ಕೇಜ್ರಿವಾಲ್

ನವದೆಹಲಿ: ಇ20 ಪೆಟ್ರೋಲ್ ಕುರಿತ ಕಳವಳದ ಬಗ್ಗೆ ಚರ್ಚಿಸಲು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ.

ಪೆಟ್ರೋಲ್ ಬಂಕ್‌ಗಳಲ್ಲಿ ಶುದ್ಧ ಪೆಟ್ರೋಲ್ ಮತ್ತು ಇ20 ಪೆಟ್ರೋಲ್ ಎರಡೂ ಆಯ್ಕೆ ದೊರೆಯಬೇಕು.

ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಕಡಿಮೆ ಬೆಲೆ ನಿಗದಿಪಡಿಸಬೇಕು ಎಂದು ಅವರು ಮಂಗಳವಾರ ವಿನಂತಿಸಿದ್ದಾರೆ.

ಪ್ರಧಾನಿ ಅವರಿಗೆ ಬರೆದ ಪತ್ರದಲ್ಲಿ ಕೇಜ್ರಿವಾಲ್, ತನ್ನ ಪ್ರಸ್ತಾವಿತ ಭೇಟಿಯ ಸಂದರ್ಭ ಈ ವಿಷಯಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಮತ್ತು ಜನರಿಂದ ತಾನು ಸ್ವೀಕರಿಸಿರುವ ಪ್ರತಿಕ್ರಿಯೆಗಳನ್ನು ವಿವರಿಸಲು ಬಯಸುವುದಾಗಿ ತಿಳಿಸಿದ್ದಾರೆ.

ಈ ಅರ್ಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಹಿ ಹಾಕುವಂತೆ ಜನರಲ್ಲಿ ವಿನಂತಿಸಲಾಗಿದೆ. ಸಂಗ್ರಹಿಸಲಾದ ಎಲ್ಲಾ ಪ್ರತಿಕ್ರಿಯೆಗಳನ್ನು ಪ್ರಧಾನಿ ಅವರ ಭೇಟಿಯ ಸಂದರ್ಭ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ತಮಗೆ ಭೇಟಿಗೆ ಸಮಯಾವಕಾಶ ನೀಡಲಿದ್ದಾರೆ ಎಂದು ಕೇಜ್ರಿವಾಲ್ ಭರವಸೆ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries