HEALTH TIPS

Ethanol ಮಿಶ್ರಣ ಯೋಜನೆ ಇನ್ನೂ ಪ್ರಾಯೋಗಿಕ ಹಂತದಲ್ಲಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್‌ಗೆ ಶೇ. 20ರಷ್ಟು ಎಥೆನಾಲ್ (E20) ಮಿಶ್ರಣ ಮಾಡುವ ಯೋಜನೆಯು ಇನ್ನೂ ಪ್ರಯೋಗ ಹಂತದಲ್ಲಿದ್ದು, ಅದರ ಪರಿಣಾಮಗಳ ಬಗ್ಗೆ ಮುಂದಿನ ವರ್ಷದ ವೇಳೆಗೆ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

2025-26ನೇ ಸಾಲಿನ ಎಥೆನಾಲ್ ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಈ ಮಾಹಿತಿ ನೀಡಿದರು.

"ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಮಿಶ್ರಣ ಮಾಡುವ ಯೋಜನೆಯು ಸರಕಾರದ ಪ್ರಾಯೋಗಿಕ ಕಾರ್ಯಕ್ರಮವಾಗಿದೆ. ಇದರ ಪರಿಣಾಮಗಳ ಕುರಿತು ಮುಂದಿನ ವರ್ಷದ ವೇಳೆಗೆ ಫಲಿತಾಂಶಗಳು ಲಭ್ಯವಾಗಲಿವೆ" ಎಂದು ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಪೆಟ್ರೋಲ್‌ನಲ್ಲಿ ಶೇ. 20ರಷ್ಟು ಎಥೆನಾಲ್ ಮಿಶ್ರಣದ ಗುರಿ ಸಾಧಿಸಲು ಕೇಂದ್ರ ಸರಕಾರ ರೂಪಿಸಿರುವ ನೀತಿಯ ಅನುಷ್ಠಾನದ ಮೇಲೆ ಕರ್ನಾಟಕ ಹೈಕೋರ್ಟ್ ಆದೇಶವು ಪರಿಣಾಮ ಬೀರಬಹುದು ಎಂದು BPCL ತನ್ನ ಅರ್ಜಿಯಲ್ಲಿ ವಾದಿಸಿದೆ.

ವಿಚಾರಣೆ ವೇಳೆ, ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶದ ವಿರುದ್ಧ BPCL ಏಕೆ ವಿಭಾಗೀಯ ಪೀಠದ ಮೊರೆ ಹೋಗಿಲ್ಲ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು.

ಇದಕ್ಕೆ ಉತ್ತರಿಸಿದ ಅಟಾರ್ನಿ ಜನರಲ್, ಎಥೆನಾಲ್ ಪೂರೈಕೆ ಒಪ್ಪಂದಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇವೆ ಎಂದು ತಿಳಿಸಿದರು.

"ಈ ವಿಚಾರವು ರಾಷ್ಟ್ರೀಯ ನೀತಿಗೆ ಸಂಬಂಧಿಸಿದ್ದಾಗಿದ್ದು, ಅದರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ" ಎಂದು ಅವರು ಹೇಳಿದರು.

ಈ ಪ್ರಕರಣಕ್ಕೆ ತ್ವರಿತ ವಿಚಾರಣೆ ಅಗತ್ಯವಿರುವುದರಿಂದ, ಸಂಬಂಧಿತ ಪ್ರಕರಣಗಳನ್ನು ಒಟ್ಟಿಗೆ ಪರಿಗಣಿಸಲು ವರ್ಗಾವಣೆ ಅರ್ಜಿ ಸಲ್ಲಿಸಲು ಅನುಮತಿ ನೀಡುವಂತೆ ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries