HEALTH TIPS

ಸಂಸತ್‌ ಚಲೊ ವೇಳೆ ಲಾಠಿ ಚಾರ್ಜ್: ತುರ್ತು ಅರ್ಜಿ ವಿಚಾರಣೆ ನಿರಾಕರಿಸಿದ ದೆಹಲಿ HC

ನವದೆಹಲಿ: ಸಂಸತ್‌ ಚಲೊ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ಲಾಠಿ ಚಾರ್ಜ್, ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದರು. ಈ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. 


ಈ ವೇಳೆ ಮುಖ್ಯ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ಪೀಠವು, 'ಇಂತಹ ವಿಷಯಗಳಲ್ಲಿ ನ್ಯಾಯಾಲಯವನ್ನು ಎಳೆದು ತರಬೇಡಿ' ಎಂದು ಅರ್ಜಿದಾರರಿಗೆ ಸೂಚಿಸಿತು.

ಈ ಅರ್ಜಿಯ ವಿಚಾರಣೆ ಬುಧವಾರ ನಡೆಸಲಾಗುವುದು ಎಂದು ಪೀಠ ತಿಳಿಸಿದೆ.

ವಿವಿಧ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನೇತೃತ್ವದಲ್ಲಿ ಸೋಮವಾರ ಸಾವಿರಾರು ವಿದ್ಯಾರ್ಥಿಗಳು 'ಸಂಸತ್‌ ಚಲೊ' ಚಳವಳಿ ಹಮ್ಮಿಕೊಂಡಿದ್ದರು.

ಹುಣಸೂರು: ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆವಿದ್ಯಾರ್ಥಿಗಳ ಮೇಲೆ ಕ್ರೂರ ವರ್ತನೆ: ಓಂ ಬಿರ್ಲಾ ಭೇಟಿಯಾದ ವಿಪಕ್ಷಗಳ ನಾಯಕರು

ಪ್ರತಿಭಟನಾಕಾರರ ಆರೋಪ

ಪೊಲೀಸರು ಪ್ರತಿಭಟನೆಯನ್ನು ತಡೆಯಲು ಹಿಂಸಾತ್ಮಕ ಹಾದಿ ತುಳಿದಿದ್ದಾರೆ. ಇದರಿಂದಾಗಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಹೋರಾಟಗಾರ ಸೊನಮ್‌ ವಾಂಗ್ಚೂಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೊ ಅವರನ್ನೂ ತಳ್ಳಲಾಗಿದೆ ಎಂದು ಸಿಜೆಪಿ ಆರೋಪಿಸಿದೆ.

ಪೊಲೀಸರ ಸ್ಪಷ್ಟನೆ

ಗೀತಾಂಜಲಿ ಅವರ ಮೇಲೆ ನಡೆದಿದೆ ಎನ್ನಲಾದ ಹಲ್ಲೆಯ ಆರೋಪಗಳನ್ನು ದೆಹಲಿ ಪೊಲೀಸರು ನಿರಾಕರಿಸಿದ್ದು, ಈ ಕುರಿತು ಹರಿಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಮತ್ತು ದಾರಿ ತಪ್ಪಿಸುವಂತಿವೆ ಎಂದು ಸ್ಪಷ್ಟನೆ ನೀಡಿದ್ದಾರೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries