HEALTH TIPS

NEET ಪ್ರತಿಭಟನೆ: ಪೊಲೀಸ್ ದೌರ್ಜನ್ಯ ಆರೋಪದ ಅರ್ಜಿಗಳ ವಿಚಾರಣೆ ಜು. 27ಕ್ಕೆ

ನವದೆಹಲಿ: ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯದ ವಿರುದ್ಧ ಸಲ್ಲಿಕೆಯಾಗಿರುವ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಜುಲೈ 27ರಂದು ನಡೆಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ. 


ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಓಖಿಂ) ಪಾರದರ್ಶಕತೆಗೆ ಆಗ್ರಹಿಸಿ 'ಕಾಕ್ರೋಚ್ ಜನತಾ ಪಾರ್ಟಿ' (ಅಎP) ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಜುಲೈ 20ರಂದು ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್ತಿನ ಕಡೆಗೆ 'ಸಂಸತ್ ಚಲೋ' ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲ ಪ್ರಯೋಗ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗಳು ಸಂಸತ್ತಿನ ಕಡೆ ತೆರಳದಂತೆ ತಡೆಯಲು ಭದ್ರತಾ ಸಿಬ್ಬಂದಿ ಹಾಗೂ ದೆಹಲಿ ಪೊಲೀಸರು ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿದ್ದರು ಎಂದು ಆರೋಪಿಸಲಾಗಿದೆ.

ಶಾಂತಿಯುತವಾಗಿ ಚಳವಳಿ ನಡೆಸುತ್ತಿದ್ದ ಯುವಕರು ಮತ್ತು ಮಹಿಳಾ ವಿದ್ಯಾರ್ಥಿನಿಯರ ಮೇಲೆಯೂ ಪೊಲೀಸರು ಅತಿಯಾದ ಬಲಪ್ರಯೋಗ ಮಾಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದ್ದವು.

ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮತ್ತು ವಿಚಾರಣೆ

ಪೋಲೀಸ್ ದೌರ್ಜನ್ಯ ಹಾಗೂ ಅಕ್ರಮಗಳನ್ನು ಖಂಡಿಸಿ ಸಲ್ಲಿಕೆಯಾಗಿರುವ ಎರಡು ಪ್ರತ್ಯೇಕ ಅರ್ಜಿಗಳಿಗೆ ಸಂಬಂಧಿಸಿದಂತೆ ಹಿರಿಯ ವಕೀಲರಾದ ಶ್ಯಾಮ್ ದಿವಾನ್ ಹಾಗೂ ಗೋಪಾಲ್ ಶಂಕರನಾರಾಯಣನ್ ಅವರು, ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ಉಲ್ಲೇಖಿಸಿದ್ದು, ನ್ಯಾಯಮೂರ್ತಿಗಳು ಜುಲೈ 27ರಂದು ವಿಚಾರಣೆ ನಡೆಸಲು ಒಪ್ಪಿಕೊಂಡಿದ್ದಾರೆ.

'ಪೊಲೀಸರು ವಿದ್ಯಾರ್ಥಿಗಳ ಮೇಲ ಬಲಪ್ರಯೋಗ ಮಾಡಿದ್ದಾರೆ. ಈಗ ನ್ಯಾಯಾಲಯ ನಮ್ಮ ಮತ್ತು ಪೊಲೀಸರ ನಡುವೆ ನಿಂತಿದೆ' ಎಂದು ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಹೇಳಿದರು. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries