HEALTH TIPS

NEET ಪ್ರತಿಭಟನೆಯ ವೇಳೆ ಪೆಲೆಟ್ ಗನ್ ಬಳಕೆಯಿಂದ ವಿದ್ಯಾರ್ಥಿಯ ದೃಷ್ಟಿಗೆ ಹಾನಿ ಆರೋಪ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಅತಿಯಾದ ಬಲಪ್ರಯೋಗ ನಡೆಸಿದ್ದು, ಪೆಲೆಟ್ ಗನ್ ಬಳಕೆಯಿಂದ ಕೆಲವರ ದೃಷ್ಟಿಗೆ ಹಾನಿ ಸೇರಿದಂತೆ ಗಂಭೀರ ಗಾಯಗಳಾಗಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. 


ಗಾಯಗೊಂಡ ಪ್ರತಿಭಟನಾಕಾರರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆಯ ವೇಳೆ ಗಾಯಗೊಂಡ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಸಾಹಿಲ್ ಅವರ ಒಂದು ಕಣ್ಣಿಗೆ ಪೆಲೆಟ್ ತಗುಲಿ ತೀವ್ರ ಹಾನಿಯಾಗಿದೆ ಎಂದು ಹೇಳಿದರು. ಅವರ ದೃಷ್ಟಿಯನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆಯೇ ಎಂಬ ಬಗ್ಗೆ ವೈದ್ಯರು ಖಚಿತವಾಗಿ ಹೇಳಿಲ್ಲ ಎಂದರು.

ಜುಲೈ 20ರಂದು ಸಿಜೆಪಿ ನಡೆಸಿದ ಮೆರವಣಿಗೆಯಲ್ಲಿ ಹಲವಾರು ಪ್ರತಿಭಟನಾಕಾರರು ಪೆಲೆಟ್ ಗನ್ ಗಾಯಗಳಿಗೆ ಒಳಗಾಗಿದ್ದಾರೆ ಎಂದು Iಟಿಜiಚಿ ಖಿoಜಚಿಥಿ ಪ್ರಕಟಿಸಿದ ವಿಶೇಷ ವರದಿಯ ಒಂದು ದಿನದ ಬಳಿಕ ಗಾಂಧಿ ಈ ಆರೋಪ ಮಾಡಿದರು. ಗಾಯಗೊಂಡವರು ಹಾಗೂ ವೈದ್ಯಕೀಯ ದಾಖಲೆಗಳನ್ನು ಉಲ್ಲೇಖಿಸಿರುವ ವರದಿಯಲ್ಲಿ, ದಿಲ್ಲಿ ಪೊಲೀಸರು ಹಾಗೂ ಅಧಿಕೃತ ಸತ್ಯಪರಿಶೀಲಕರ ನಿರಾಕರಣೆಗಳ ನಡುವೆಯೂ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಪೆಲೆಟ್ ಗನ್ ಬಳಸಲಾಗಿದೆ ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಪೆಲೆಟ್ ಗನ್ ಬಳಕೆಯಿಂದ ಕೆಲವರಿಗೆ ಕಣ್ಣು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ದೇಹದೊಳಗೆ ಉಳಿಯುವ ಸೀಸ ಆಧಾರಿತ ಪೆಲೆಟ್‌ಗಳು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆಯೂ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಘಟನೆ ನಡೆದಾಗ ಸಾಹಿಲ್ ರಾಷ್ಟ್ರಧ್ವಜ ಹಿಡಿದು ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ಎಂದು ಗಾಂಧಿ ಹೇಳಿದರು.

ಪ್ರತಿಭಟನಾಕಾರರ ಪರವಾಗಿ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟ ರಾಹುಲ್ ಗಾಂಧಿ ಅವರು, ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರನ್ನು ಹುದ್ದೆಯಿಂದ ತೆಗೆದುಹಾಕಬೇಕು. ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಪ್ರಯೋಗಿಸಿ, ಲಾಠಿ ಪ್ರಹಾರ ನಡೆಸಿದ ಆರೋಪಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಲಪ್ರಯೋಗದಿಂದ ತೊಂದರೆ ಅನುಭವಿಸಿದ ಸಾವಿರಾರು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮುಖ್ಯಸ್ಥರಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದ ಬಲಪ್ರಯೋಗದ ಆರೋಪಗಳ ಕುರಿತು ಕ್ರಮ ಕೈಗೊಳ್ಳುವ ಬಗ್ಗೆ ಸರಕಾರ ಸಮ್ಮತಿ ಸೂಚಿಸಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಆದರೂ, ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತು ಇನ್ನೂ ತೀರ್ಮಾನವಾಗಿಲ್ಲ. ಈ ವಿಷಯವನ್ನು ಶುಕ್ರವಾರ ಸರಕಾರ ಚರ್ಚಿಸಲಿದೆ ಎಂದು ಗಾಂಧಿ ತಿಳಿಸಿದರು.

"ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಪ್ರತೀಕವೇ ಧರ್ಮೇಂದ್ರ ಪ್ರಧಾನ್" ಎಂದು ರಾಹುಲ್ ಗಾಂಧಿ ಆರೋಪಿಸಿದರು. ದೇಶದ ಶಿಕ್ಷಣ ವ್ಯವಸ್ಥೆಯ ಅಧಃಪತನಕ್ಕೆ ಕೇಂದ್ರ ಸಚಿವರೇ ಕಾರಣರಾಗಿದ್ದು, ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜುಲೈ 20ರಂದು ಹೊಸದಿಲ್ಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ದೆಹಲಿ ಪೊಲೀಸರು ಸಾಹಿಲ್ ಅವರ ಮುಖದತ್ತ ಪೆಲೆಟ್ ಗನ್‌ನಿಂದ ಗುಂಡು ಹಾರಿಸಿದ್ದಾರೆ ಎಂದು ಗಾಂಧಿ ಆರೋಪಿಸಿದರು.

19 ವರ್ಷದ ಸಾಹಿಲ್ ದಿಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ಕುಟುಂಬ ನಿರ್ವಹಣೆಗಾಗಿ ಅರೆಕಾಲಿಕವಾಗಿ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. 2025ರಲ್ಲಿ ನಡೆದ SSಅ ದಿಲ್ಲಿ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಅವರೂ ಸಂತ್ರಸ್ತರಾಗಿದ್ದರು. ಈಗಲೂ ಅದೇ ಸಂಸ್ಥೆಗೆ ಪರೀಕ್ಷೆ ನಡೆಸುವ ಹೊಣೆ ನೀಡಿರುವುದರಿಂದ ಪ್ರಶ್ನೆಪತ್ರಿಕೆ ಮತ್ತೊಮ್ಮೆ ಸೋರಿಕೆಯಾಗುವ ಆತಂಕವಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನ್ಯಾಯ ಮತ್ತು ಉತ್ತಮ ಭವಿಷ್ಯಕ್ಕಾಗಿ ಅವರು ಪ್ರತಿಭಟನೆಗೆ ಸೇರಿದ್ದರು. ಈಗ ಅವರು ಶಾಶ್ವತವಾಗಿ ಒಂದು ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಅಪಾಯ ಎದುರಿಸುತ್ತಿದ್ದಾರೆ ಎಂದು ಗಾಂಧಿ ಹೇಳಿದರು.

"ಪ್ರಶ್ನೆಗಳನ್ನು ಕೇಳುವ ಹಾಗೂ ಹೊಣೆಗಾರಿಕೆಯನ್ನು ಕೇಳುವ ವಿದ್ಯಾರ್ಥಿಗಳು ಯಾವ ರೀತಿಯ ಪರಿಸ್ಥಿತಿ ಎದುರಿಸಬೇಕಾಗುತ್ತಿದೆ ಎಂಬುದಕ್ಕೆ ಸಾಹಿಲ್ ಉದಾಹರಣೆ. ನಾವು ಸಾಹಿಲ್ ಹಾಗೂ ಹೊಣೆಗಾರಿಕೆಯನ್ನು ಆಗ್ರಹಿಸುವ ಪ್ರತಿಯೊಬ್ಬ ವಿದ್ಯಾರ್ಥಿಯೊಂದಿಗೆ ನಿಲ್ಲುತ್ತೇವೆ. ಇನ್ನು ಸಾಕು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.











ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries