HEALTH TIPS

ಮಮತಾಗೆ ಮತ್ತೆ ಶಾಕ್: ಸುಷ್ಮಿತಾ ಸೇರಿ TMCಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ

 ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ ಪಕ್ಷದ (ಟಿಎಂಸಿ) ಮಾಜಿ ರಾಜ್ಯಸಭಾ ಸಂಸದರಾದ ಸುಷ್ಮಿತಾ ದೇವ್, ಸುಖೇಂದು ಶೇಖರ್ ರೇ ಮತ್ತು ಪ್ರಕಾಶ್ ಚಿಕ್ ಬಾರಿಕ್‌ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಪಕ್ಷದ ಸಾಲ್ಟ್ ಲೇಕ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಟಿಎಂಸಿ ನಾಯಕರಿಗೆ ಪಕ್ಷದ ಧ್ವಜ ನೀಡುವ ಮೂಲಕ ಬರಮಾಡಿಕೊಂಡಿದ್ದಾರೆ.

ಇದೇ ವೇಳೆ ಮಾತನಾಡಿದ ಭಟ್ಟಾಚಾರ್ಯ, 'ಈ ಮೂವರು ಮಾಜಿ ಸಂಸದರ ಅನುಭವವು ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪರಾಭವಗೊಂಡಿತ್ತು. ಬಳಿಕ ಜೂನ್ 8 ಮತ್ತು 10ರ ನಡುವೆ ಪಕ್ಷದ ರಾಜ್ಯಸಭಾ ಸದಸ್ಯರಾಗಿದ್ದ ಸುಖೇಂದು ಶೇಖರ್ ರೇ, ಸುಷ್ಮಿತಾ ದೇವ್ ಮತ್ತು ಪ್ರಕಾಶ್ ಚಿಕ್ ಬಾರಿಕ್‌ ರಾಜೀನಾಮೆ ನೀಡಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries