ನವದೆಹಲಿ (PTI): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್‌ಟಿ ಮಂಡಳಿಯ 57ನೇ ಸಭೆಯು ದೆಹಲಿಯಲ್ಲಿ ಸೆಪ್ಟೆಂಬರ್ 12ರಂದು ನಡೆಯಲಿದೆ. ಸೆಪ್ಟೆಂಬರ್ 11ರಂದು ಅಧಿಕಾರಿಗಳ ಸಭೆ ನಡೆಯಲಿದೆ ಎಂದು ಮಂಡಳಿಯ ಕಾರ್ಯದರ್ಶಿ ತಿಳಿಸಿದ್ದಾರೆ.
ರಾಜ್ಯಗಳ ಹಣಕಾಸು ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಈ ಬಾರಿ ನಡೆಯಲಿರುವ ಸಭೆಯಲ್ಲಿ ಮಾಸಿಕ ₹2.5 ಲಕ್ಷಕ್ಕಿಂತ ಹೆಚ್ಚು ಇನ್‌ಫುಟ್ ಟ್ಯಾಕ್ಸ್ ಕ್ರೆಡಿಟ್ ವರ್ಗಾಯಿಸುವ ವ್ಯವಹಾರದ ಜಿಎಸ್‌ಟಿ ನೋಂದಣಿ ಸರಳಗೊಳಿಸುವ, ಜಿಎಸ್‌ಟಿ ನೋಂದಣಿ ರದ್ಧತಿ ಸೇರಿದಂತೆ ವಿವಿಧ ವಿಷಯಗಳು ಚರ್ಚೆ ಆಗುವ ನಿರೀಕ್ಷೆ ಇದೆ.
ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆದ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಜಿಎಸ್‌ಟಿ ದರ ಪರಿಷ್ಕರಣೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ನಾಲ್ಕು ಹಂತದ ಜಿಎಸ್‌ಟಿಯನ್ನು (ಶೇ 5, ಶೇ 12, ಶೇ 18 ಮತ್ತು ಶೇ 28) ಎರಡು ಹಂತಕ್ಕೆ (ಶೇ 5 ಮತ್ತು ಶೇ 18) ಇಳಿಸಲಾಗಿತ್ತು. ಇದೀಗ ಮತ್ತೆ ಒಂದು ವರ್ಷದ ಬಳಿಕ ಸಭೆ ನಡೆಯುತ್ತಿದೆ.

