HEALTH TIPS

ಟಿಎಂಸಿ ಕಚೇರಿಯಲ್ಲಿ ಜಗಳ; ಅಭಿಷೇಕ್, ಡೆರೆಕ್ ವಿರುದ್ಧ ಎಫ್‌ಐಆರ್‌: 13 ಮಂದಿ ಬಂಧನ

ಕೋಲ್ಕತ್ತ: ಇಲ್ಲಿನ ಕಾಮಕ್‌ ಬೀದಿಯಲ್ಲಿರುವ ತೃಣಮೂಲ ಕಾಂಗ್ರೆಸ್‌ ಪಕ್ಷದ (ಟಿಎಂಸಿ) ಕಚೇರಿಯಲ್ಲಿ ಗುರುವಾರ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿ, ರಾಜ್ಯಸಭಾ ನಾಯಕ ಡೆರೆಕ್ ಒಬ್ರಯಾನ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದ್ದು, 13 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಅನಧಿಕೃತವಾಗಿ ಅಳವಡಿಸಿದ್ದ ಜಾಹೀರಾತು ಫಲಕಗಳನ್ನು ತೆಗೆದುಹಾಕಲು ಕೋಲ್ಕತ್ತದ ಮಹಾನಗರ ಪಾಲಿಕೆಗೆ ಅಧಿಕಾರಿಗಳು ಕಚೇರಿಯ ಒಳಗೆ ಪ್ರವೇಶಿಸಲು ಯತ್ನಿಸಿದ್ದರು. ಈ ವೇಳೆ ಕಚೇರಿಯ ಖಾಸಗಿ ಭದ್ರತಾ ಸಿಬ್ಬಂದಿಗೆ ಅಭಿಷೇಕ್ ಹಾಗೂ ಡೆರೆಕ್ ಬೆಂಬಲಿಗರು ಹಾಗೂ ಕಾರ್ಯಕರ್ತರು ಅಡ್ಡಿಪಡಿಸಿದ್ದರು. ಈ ವೇಳೆ ಕೆಲವರಿಗೆ ಸಣ್ಣ- ಪುಟ್ಟ ಗಾಯಗಳಾಗಿದ್ದವು.

ಪೊಲೀಸರ ಕೆಲಸಕ್ಕೆ ಅಡ್ಡಿ ಉಂಟುಮಾಡಿ, ಪಾಲಿಕೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಕ್ಕೆ, ಕಾನೂನುಬಾಹಿರವಾಗಿ ಗುಂಪುಗೂಡಿದ್ದಕ್ಕೆ ಟಿಎಂಸಿ ಕಾರ್ಯಕರ್ತರ ವಿರುದ್ಧ ಇಲ್ಲಿನ ಶೇಕ್ಸ್‌ಪಿಯರ್‌ ಸರನಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

'ಟಿಎಂಸಿ ಸಂಸದರಾದ ಅಭಿಷೇಕ್‌ ಬ್ಯಾನರ್ಜಿ, ಡೆರೆಕ್ ಒಬ್ರಯಾನ್, ಪಕ್ಷದ ಶಾಸಕರಾದ ಹುಮಾಯೂನ್‌ ಕಬೀರ್‌, ಮುಖಂಡ ಬೈಸ್ವಾನೊರ್‌ ಚಟ್ಟೋಪಾಧ್ಯಾಯ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

 ಡೆರೆಕ್ ಒಬ್ರಯಾನ್

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries