ನವದೆಹಲಿ: ಅಮೆರಿಕವು 2025ರಿಂದ ಇದುವರೆಗೆ ಒಟ್ಟು 4,840 ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ತಿಳಿಸಿದೆ.
'2026ರಲ್ಲಿ ಜನವರಿ 1ರಿಂದ ಇಲ್ಲಿಯವರೆಗೆ ಅಮೆರಿಕದಿಂದ ಗಡಿಪಾರು ಮಾಡಲಾದ ಭಾರತೀಯರ ಒಟ್ಟು ಸಂಖ್ಯೆ 1,273 ಆಗಿದೆ.
2025ರಲ್ಲಿ ಒಟ್ಟು 3,567 ಭಾರತೀಯ ಪ್ರಜೆಗಳನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿತ್ತು' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಗಡಿಪಾರು ವಿಷಯಗಳಿಗೆ ಸಂಬಂಧಿಸಿದಂತೆ ಭಾರತವು ಹಲವು ದೇಶಗಳ ಸರ್ಕಾರಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

