HEALTH TIPS

'ಆನ್-ಸ್ಕ್ರೀನ್ ಮಾರ್ಕಿಂಗ್' ಮೂಲಕ ಪರೀಕ್ಷೆ: 21ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ

ನವದೆಹಲಿ: 'ಆನ್-ಸ್ಕ್ರೀನ್ ಮಾರ್ಕಿಂಗ್' (ಒಎಸ್‌ಎಂ) ವ್ಯವಸ್ಥೆ ಮೂಲಕ ಪರೀಕ್ಷೆ ನಡೆಸಲು ನಿಯಮಾವಳಿಗಳನ್ನು ರೂಪಿಸುವಂತೆ ಕೇಂದ್ರ ಸರ್ಕಾರ ಮತ್ತು ಸಿಬಿಎಸ್‌ಇಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 21ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.


ಸಿಬಿಎಸ್‌ಇ ಒಎಸ್‌ಎಂ ಮೌಲ್ಯಮಾಪನ ವ್ಯವಸ್ಥೆಯು ಡಿಜಿಟಲ್‌ ಗ್ರೇಡಿಂಗ್‌ ವಿಧಾನವಾಗಿದ್ದು, ಶಿಕ್ಷಕರು ಭೌತಿಕ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುವ ಬದಲು, ಈ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಮಾಡಿದ ಪ್ರತಿಗಳನ್ನು ಕಂಪ್ಯೂಟರ್‌ನಲ್ಲಿ ಪರಿಶೀಲಿಸುತ್ತಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಮತ್ತು ವಿ. ಮೋಹನಾ ಅವರ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂತು.

ಒಎಸ್‌ಎಂ ವ್ಯವಸ್ಥೆ ಮೂಲಕ ಪರೀಕ್ಷೆ ನಡೆಸಲು ನಿಯಮಗಳನ್ನು ರೂಪಿಸಲು ನ್ಯಾಯಾಲಯವು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರ ಸಲಹೆಯನ್ನು ಈ ಹಿಂದೆ ಕೋರಿತ್ತು. ಮೆಹ್ತಾ ಅವರು ಶುಕ್ರವಾರ ಲಭ್ಯವಿಲ್ಲ ಎಂಬ ಮಾಹಿತಿ ತಿಳಿದ ನಂತರ, ಪೀಠವು ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries