ಕಾಸರಗೋಡು: ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿ ಕಾರ್ಯಕ್ರಮ ಆ. 23ರಂದು ಮಧ್ಯಾಹ್ನ 2.30ಕ್ಕೆ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ಜರುಗಲಿದೆ.ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ಕಾರ್ಯಕ್ರಮ ನಡೆಯುವುದು.
ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ, ಕಿರಿಯ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು ಹಾಗೂ 1ರಿಂದ ಹತ್ತನೇ ತರಗತಿಯ ವಿದ್ಯಾರ್ಥಿ ಕವಿಗಳು, ಕಾಲೇಜು (ಪದವಿ ಪೂರ್ವ, ಪದವಿ, ಸ್ನಾತಕೋತ್ತರ) ವಿದ್ಯಾರ್ಥಿ ಕವಿಗಳು ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ವಾಟ್ಸ್ ಪ್ ಮೂಲಕ ಕಳುಹಿಸಬೇಕು. ಮಕ್ಕಳ ಕವನಗಳನ್ನು ವಾಚಿಸಲು ಅವಕಾಶ ನೀಡಲಾಗಿದೆ.
ಭಾಗವಹಿಸುವ ಕವಿಗಳಿಗೆ ಪ್ರಮಾಣ ಪತ್ರ , ಸಾಹಿತ್ಯ ಕೃತಿಗಳನ್ನು ನೀಡಿ ಗೌರವಿಸಲಾಗುವುದು. ಮಾಹಿತಿಗಾಗಿ ಶಿವರಾಮ ಕಾಸರಗೋಡು, ಅಧ್ಯಕ್ಷರು,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ,ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ, ಕಾಸರಗೋಡು-671121
ಮೊಬೈಲ್ :-9448572016 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

