ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಸೇರಿದ್ದ ಆಹಾರ ಸೇವಿಸಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಬಿಹಾರ ನಳಂದ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ತೀವ್ರ ತಲೆ ಸುತ್ತುವಿಕೆ, ವಾಂತಿ ಕಾಣಿಸಿಕೊಂಡಿದೆ.
ಕೂಡಲೇ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾಲೆಯ ಊಟ ಪರೀಶಿಲನೆ ನಡೆಸಿದಾಗ ಅಡುಗೆಗೆ ಉಪ್ಪಿನ ಬದಲಾಗಿ ಡಿಟರ್ಜೆಂಟ್ ಅನ್ನು ಬಳಸಿದ್ದಾರೆ. ಈ ಊಟ ಸೇವಿಸಿದ 36ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಶಾಲೆಯ ಅಡುಗೆ ಕೋಣೆಯಲ್ಲಿ ಉಪ್ಪು ಹಾಗೂ ಡಿಟರ್ಜೆಂಟ್ ಪುಡಿ ಅನ್ನು ಒಟ್ಟಿಗೆ ಇರಿಸಲಾಗಿತ್ತು. ಅಡುಗೆಗೆ ಉಪ್ಪಿನ ಬದಲಾಗಿ ಡಿಟರ್ಜೆಂಟ್ ಬಳಸಿದ್ದರಿಂದ ಈ ಘಟನೆ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

