ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ-ಯುಜಿ) ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳ (ಎನ್‌ಇಟಿ) ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಶನಿವಾರ ಪ್ರಕಟಿಸಿದೆ.
84 ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಪರೀಕ್ಷೆಗೆ ದೇಶದಾದ್ಯಂತ 6.07 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿದ್ದರು. 97,000ಕ್ಕೂ ಹೆಚ್ಚು ಅಭ್ಯರ್ಥಿಗಳು ಪಿಎಚ್‌ಡಿ ಪ್ರವೇಶಕ್ಕೆ ಮತ್ತು 4,000ಕ್ಕೂ ಹೆಚ್ಚು ಅಭ್ಯರ್ಥಿಗಳು ಕಿರಿಯ ಸಂಶೋಧನಾ ಫೆಲೋಶಿಪ್‌ಗೆ (ಜೆಆರ್‌ಎಫ್) ಅರ್ಹತೆ ಪಡೆದಿದ್ದಾರೆ.
ಈ ಪರೀಕ್ಷೆಗಳನ್ನು ಜೂನ್‌ನಲ್ಲಿ ನಡೆಸಲಾಗಿತ್ತು. ಪರೀಕ್ಷೆ ನಡೆದ ಎರಡು ತಿಂಗಳ ನಂತರ ಅಂದರೆ ಆಗಸ್ಟ್ 16ರಂದು ಎನ್‌ಟಿಎ ಯುಜಿಸಿ-ನೆಟ್‌ನ ಉತ್ತರ ಕೀಲಿಗಳನ್ನು ಬಿಡುಗಡೆ ಮಾಡಲಾಗಿತ್ತು.
ಆದರೆ, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಸೋರಿಕೆ ಆರೋಪಗಳು ವ್ಯಕ್ತವಾದ ಬಳಿಕ ಸಮಾಜಶಾಸ್ತ್ರ, ವಾಣಿಜ್ಯಶಾಸ್ತ್ರ ಮತ್ತು ಇಂಗ್ಲಿಷ್ ಪತ್ರಿಕೆಗಳಿಗೆ ಸಂಬಂಧಿಸಿದಂತೆ ಎನ್‌ಇಟಿ ವಿಶೇಷ ಸೂಚನೆ ಹೊರಡಿಸಿತ್ತು. ಹಾಗಾಗಿ ಫಲಿತಾಂಶ ಪ್ರಕಟಣೆ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 16ರಂದು ದೋಷಗಳ ಕಾರಣ ಉಲ್ಲೇಖಿಸಿ, ಈ ಮೂರು ವಿಷಯಗಳ ಮರು ಪರೀಕ್ಷೆಯನ್ನು ಸೆಪ್ಟೆಂಬರ್ 9 ಮತ್ತು 10ರಂದು ನಡೆಸಲು ವೇಳಾಪಟ್ಟಿ ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಯಾವುದೇ ಹೆಚ್ಚುವರಿ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಎನ್‌ಇಟಿ ಘೋಷಿಸಿತ್ತು.
ಭಾರತೀಯ ವಿಶ್ವವಿದ್ಯಾಲಯಗಳು, ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಹಾಗೂ ಕಿರಿಯ ಸಂಶೋಧನಾ ಫೆಲೋಶಿಪ್‌ಗೆ ಅಭ್ಯರ್ಥಿಗಳ ಅರ್ಹತೆಯನ್ನು ನಿರ್ಧರಿಸಲು ಎನ್‌ಟಿಎ ನೆಟ್ ಪರೀಕ್ಷೆಯನ್ನು ನಡೆಸುತ್ತದೆ.

