HEALTH TIPS

ಛತ್ತೀಸ್ ಗಢ: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟ; 41 ಪ್ರಯಾಣಿಕರು ಸ್ವಲ್ಪದರಲ್ಲಿ ಪಾರು!

 ಬಿಲಾಸ್‌ಪುರ: ಛತ್ತೀಸ್ ಗಢದಲ್ಲಿ ಸಂಭಾವ್ಯ ದುರಂತವೊಂದು ತಪ್ಪಿದೆ. ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟಗೊಂಡಿದ್ದು, ಕೂದಲೆಳೆ ಅಂತರದಲ್ಲಿ 41 ಪ್ರಯಾಣಿಕರು ಪಾರಾಗಿರುವ ಘಟನೆ ನಡೆದಿದೆ. ಶುಕ್ರವಾರ ದೆಹಲಿಯಿಂದ ಬಿಲಾಸ್‌ಪುರಕ್ಕೆ ತೆರಳುತ್ತಿದ್ದ ವಿಮಾನವೊಂದು ಉತ್ತರ ಛತ್ತೀಸ್‌ಗಢದ ಬಿಲಾಸ್‌ಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಈ ಘಟನೆ ನಡೆದಿದೆ.


ಅಲಯನ್ಸ್ ಏರ್ ನಿರ್ವಹಿಸುತ್ತಿದ್ದ 9I613 ವಿಮಾನ ಬೆಳಿಗ್ಗೆ 11 ಗಂಟೆ ಸುಮಾರಿಗೆ ಲ್ಯಾಂಡಿಂಗ್ ಆಗುವಾಗ ಅದರ ಟೈರ್ ಸ್ಫೋಟಗೊಂಡಿದೆ. ಆ ವಿಮಾನದಲ್ಲಿ 37 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಿಮಾನ ಲ್ಯಾಂಡಿಂಗ್ ಆಗುವಾಗ ಅದರ ಎಡಭಾಗದ ಟೈರ್ ಸ್ಫೋಟಗೊಂಡಿದೆ. ಘಟನೆಯ ನಂತರ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದ್ದು, ರನ್‌ವೇಯಿಂದ ಟರ್ಮಿನಲ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ಬಳಿಕ ಬಿಲಾಸ್‌ಪುರದಿಂದ ಮುಂದಿನ ಪ್ರಯಾಣಕ್ಕಾಗಿ ನಿಗದಿಯಾಗಿದ್ದ ವಿಮಾನದ ಹಾರಾಟವನ್ನು ವಿಮಾನಯಾನ ಸಂಸ್ಥೆಯು ರದ್ದುಗೊಳಿಸಿತು. ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries