HEALTH TIPS

ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ. 4.45ಕ್ಕೆ ಏರಿಕೆ

ನವದೆಹಲಿ: ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಜುಲೈ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ದರ ಶೇ. 4.45ಕ್ಕೆ ಏರಿಕೆಯಾಗಿದೆ. ಬುಧವಾರ ಬಿಡುಗಡೆಯಾದ ಸರಕಾರಿ ದತ್ತಾಂಶದಲ್ಲಿ ಈ ಮಾಹಿತಿ ತಿಳಿದುಬಂದಿದೆ.


ಜೂನ್ ನಲ್ಲಿ ಚಿಲ್ಲರೆ ಹಣದುಬ್ಬರವನ್ನು ಆಧರಿಸಿದ ಗ್ರಾಹಕ ಬೆಲೆ ಸೂಚ್ಯಂಕ (CPI) ಶೇ.4.38ರಷ್ಟಿತ್ತು.

ರಾಷ್ಟ್ರೀಯ ಸಾಂಖ್ಯಿಕ ಕಚೇರಿ ಬಿಡುಗಡೆ ಮಾಡಿರುವ ಗ್ರಾಹಕ ಬೆಲೆ ಸೂಚ್ಯಂಕದ ಪ್ರಕಾರ, ಜೂನ್ನಲ್ಲಿ ಶೇ. 5.32ರಷ್ಟಿದ್ದ ಆಹಾರ ಪದಾರ್ಥಗಳ ಹಣದುಬ್ಬರ ದರವು ಜುಲೈನಲ್ಲಿ ಶೇ. 5.52ಕ್ಕೆ ಏರಿಕೆಯಾಗಿದೆ.

ಗ್ರಾಹಕ ಬೆಲೆ ಸೂಚ್ಯಂಕ ಆಧರಿಸಿದ ಹಣದುಬ್ಬರವನ್ನು ಶೇ. 2ರಷ್ಟು ಏರಿಳಿತದೊಂದಿಗೆ ಶೇ. 4ರಷ್ಟು ಇರುವಂತೆ ಖಾತರಿಪಡಿಸುವ ಜವಾಬ್ದಾರಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಂದಿದೆ. ಹಣದುಬ್ಬರ ಏರಿಕೆಯಾಗಬಹುದು ಎಂಬ ಕಳವಳದ ಹಿನ್ನೆಲೆಯಲ್ಲಿ RBI ಇದಕ್ಕೂ ಮುನ್ನ ಅಲ್ಪಾವಧಿ ಸಾಲದ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries