HEALTH TIPS

ಜಾರ್ಖಂಡ್ ವಿದ್ಯಾರ್ಥಿ ಪ್ರತಿಭಟನೆ | 500 ಮಂದಿ ಅಪರಿಚಿತ ವಿದ್ಯಾರ್ಥಿಗಳು ಸೇರಿದಂತೆ 600 ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು

ರಾಂಚಿ: ಗುರುವಾರ ನಡೆದ ರಾಂಚಿಯಲ್ಲಿನ ವಿಧಾನಸಭಾ ಚಲೋ ಮೆರವಣಿಗೆಯ ಸಂಬಂಧ ಪೊಲೀಸರು 600 ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ 100 ಪ್ರತಿಭಟನಾಕಾರರ ಹೆಸರುಗಳನ್ನು ಉಲ್ಲೇಖಿಸಲಾಗಿದ್ದರೆ, 500 ಮಂದಿ ಅಪರಿಚಿತ ವಿದ್ಯಾರ್ಥಿಗಳು ಹಾಗೂ ಇನ್ನಿತರ ಪ್ರತಿಭಟನಾಕಾರರ ವಿರುದ್ಧವೂ ಪ್ರಕರಣ ದಾಖಲಾಗಿದೆ. 


ಜಾರ್ಖಂಡ್ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮವನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಗುರುವಾರ 20ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆಯನ್ನು ನಿಲ್ಲಿಸಲು ಪ್ರತಿಭಟನಾಕಾರರು ನಿರಾಕರಿಸಿದ್ದಾರೆ.

ನೇಮಕಾತಿ ಪರೀಕ್ಷೆಗಳಲ್ಲಿ ತೀವ್ರ ಪಾರದರ್ಶಕತೆ ಇರಬೇಕು, ಕೆಲವು ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಹಾಗೂ ಸಿಬಿಐನಿಂದ ಸ್ವತಂತ್ರ ತನಿಖೆ ಅಥವಾ ಹೊರರಾಜ್ಯದ ನಿವೃತ್ತ ನ್ಯಾಯಾಧೀಶರ ಸಮಿತಿಯಿಂದ ನೇಮಕಾತಿ ಹಗರಣದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜೆಪಿಎಸ್ಸಿ-ಜೆಎಸ್‌ಎಸ್ಸಿ ರಿಫಾರ್ಮ್ಸ್ ಮಂಚ್ ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದ ಬಳಿ ಪ್ರತಿಭಟನೆ ನಡೆಸುತ್ತಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries