HEALTH TIPS

ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗುವ ಮೊದಲು ಈ ಅರ್ಜಿ ಕುರಿತು ತುರ್ತು ವಿಚಾರಣೆ ನಡೆಸಬೇಕೆಂದು ಅಭ್ಯರ್ಥಿಗಳು ಕೋರಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಮತ್ತು ವಿ. ಮೋಹನಾ ಅವರ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ. 'ಈ ಪ್ರಕರಣವು 600 ಮತ್ತು 650ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಆರು ವಿದ್ಯಾರ್ಥಿಗಳಿಗೆ ಸಂಬಂಧಿಸಿದ್ದಾಗಿದೆ. ಪರೀಕ್ಷೆಯ ವೇಳೆ ತಾವು ಗುರುತಿಸಿದ್ದ ಉತ್ತರಗಳಿಗೂ, ಎನ್‌ಟಿಎ ಅಪ್‌ಲೋಡ್ ಮಾಡಿರುವ ಒಎಂಆರ್‌ ಶೀಟ್‌ಗಳಿಗೂ ವ್ಯತ್ಯಾಸವಿದೆ' ಎಂದು ವಿದ್ಯಾರ್ಥಿಗಳು ಪ್ರತಿಪಾದಿಸಿರುವುದಾಗಿ ವಕೀಲರು ಮಾಹಿತಿ ನೀಡಿದ್ದಾರೆ. ಇದೇ ವಿಚಾರವಾಗಿ ವಿದ್ಯಾರ್ಥಿಗಳು ಎನ್‌ಟಿಎಗೆ ಇಮೇಲ್ ಕಳುಹಿಸಿದ್ದಾರೆ ಮತ್ತು ಕಚೇರಿಗೂ ಭೇಟಿ ನೀಡಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಲಭಿಸಿಲ್ಲ ಎಂದೂ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿತ್ತು. ಬಳಿಕ ಜೂನ್ 21ರಂದು ಮರು ಪರೀಕ್ಷೆ ನಡೆಸಲಾಗಿತ್ತು.

ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ಕಳವು ಪ್ರಕರಣದ ಕುರಿತು ಚರ್ಚೆ ನಡೆಯಬೇಕು ಮತ್ತು ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸ್‌ 'ಬಲಪ್ರಯೋಗ'ದ ಬಗ್ಗೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಗಳಲ್ಲಿ ವಿರೋಧ ಪಕ್ಷಗಳು ಸೋಮವಾರ ಪಟ್ಟು ಹಿಡಿದವು ಎಂದು ಮೂಲಗಳು ತಿಳಿಸಿವೆ. 


ಸಂಸತ್ತಿನ ಉಭಯ ಸದನಗಳಲ್ಲಿ ವಿಪಕ್ಷಗಳ ಸದಸ್ಯರು ಸೋಮವಾರ ಗದ್ದಲ ಎಬ್ಬಿಸಿದರು. ಸರ್ಕಾರ ಮತ್ತು ವಿರೋಧ ಪಕ್ಷಗಳು ತಮ್ಮ ತಮ್ಮ ನಿಲುವುಗಳಿಗೆ ಬದ್ಧವಾಗಿರುವುದರಿಂದ ಈ ಬಿಕ್ಕಟ್ಟು ಮುಂದುವರಿಯುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಉಭಯ ಸದನಗಳ ಕಲಾಪಗಳಿಗೆ ಅಡ್ಡಿಪಡಿಸಿದ್ದಕ್ಕೆ ಸರ್ಕಾರವು ವಿರೋಧ ಪಕ್ಷಗಳನ್ನು, ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಗದ್ದಲದ ನಡುವೆಯೂ ಸರ್ಕಾರವು ಎರಡು ಮಸೂದೆಗಳಿಗೆ ಅಂಗೀಕಾರ ಪಡೆಯಿತು.

ಸಂಸತ್‌ ಕಲಾಪಗಳಿಗೆ ಉಂಟಾದ ಅಡಚಣೆಗಳ ಕುರಿತು ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, 'ಇಂದು ಎರಡು ಪ್ರಮುಖ ಮಸೂದೆಗಳನ್ನು ಅಂಗೀಕರಿಸಲಾಯಿತು. ಒಂದು, ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸುವ ಕುರಿತ ಮಸೂದೆ ಮತ್ತು ಇನ್ನೊಂದು, ಎಂಎಸ್‌ಎಂಇ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳು)ಗಳಿಗೆ ಸಂಬಂಧಿಸಿದ ಮಸೂದೆ. ಈ ಮಸೂದೆಗಳ ಕುರಿತು ಚರ್ಚೆಯಲ್ಲಿ ಭಾಗವಹಿಸಲು ವಿರೋಧ ಪಕ್ಷದ ಯಾರೂ ಇರಲಿಲ್ಲ' ಎಂದು ಹೇಳಿದರು.

'ಕಾಂಗ್ರೆಸ್‌ನ ಸಂಸದರು ಕನಿಷ್ಠ ಪಕ್ಷ ಮಸೂದೆಯ ಮೇಲಿನ ಚರ್ಚೆಯಲ್ಲಾದರೂ ಭಾಗವಹಿಸುವಂತೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕೇಳಿಕೊಂಡಿದ್ದೆ. ಆದರೆ, ತಮ್ಮದೇ ಪಕ್ಷದ ಸಂಸದರನ್ನು ನಿಯಂತ್ರಿಸಲು ಅವರಿಂದ ಸಾಧ್ಯವಾಗಲಿಲ್ಲ. ರಾಹುಲ್ ಗಾಂಧಿ ಅವರು ಸದನಕ್ಕೆ ಬರಲೇ ಇಲ್ಲ. ಕಾಂಗ್ರೆಸ್‌ ಸಂಸದರಿಗೆ ಮಾರ್ಗದರ್ಶನ ನೀಡಲು ಬೇರೆ ಯಾರೂ ಇರಲಿಲ್ಲ. ಕಾಂಗ್ರೆಸ್ ಪಕ್ಷವು ಸಂಪೂರ್ಣವಾಗಿ ಛಿದ್ರಗೊಂಡಿದೆ' ಎಂದು ಟೀಕಿಸಿದರು.

'ಬೇಡಿಕೆ ಸ್ಪಷ್ಟ'

ಲೋಕಸಭೆಯ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ ಲೋಕಸಭೆಯಲ್ಲಿನ ಕಾಂಗ್ರೆಸ್‌ನ ಉಪ ನಾಯಕ ಗೌರವ್ ಗೊಗೊಯ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, 'ನಮ್ಮ ಬೇಡಿಕೆ ಸ್ಪಷ್ಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳನ್ನು ಕ್ಷಮಿಸಿರಬಹುದು; ಆದರೆ ದೇಶದ ಯುವಜನತೆ ಗೃಹ ಸಚಿವರನ್ನು ಕ್ಷಮಿಸಿಲ್ಲ' ಎಂದರು.

'ಪ್ರತಿಭಟನನಿರತ ವಿದ್ಯಾರ್ಥಿಗಳ ಮೇಲೆ ಜುಲೈ 20ರಂದು ಭದ್ರತಾ ಪಡೆಗಳು ನಡೆಸಿದ ಬಲ ಪ್ರಯೋಗದ ಕುರಿತು ಗೃಹ ಸಚಿವರು ಸದನಕ್ಕೆ ಬಂದು ಹೇಳಿಕೆ ನೀಡಬೇಕು ಎಂಬುದು ಕಾಂಗ್ರೆಸ್‌ನ ಸ್ಪಷ್ಟ ಬೇಡಿಕೆಯಾಗಿದೆ' ಎಂದು ಹೇಳಿದರು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries