ಕಾಸರಗೋಡು: ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಹೊರಡಿಸಿರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರು ನಾಳೆ (ಶುಕ್ರವಾರ, ಆಗಸ್ಟ್ 7) ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಬೋಧನಾ ಕೇಂದ್ರಗಳು, ಐಸಿಎಸ್ಇ, ಸಿಬಿಎಸ್ಇ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗುತ್ತದೆ. ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ಮದರಸಾಗಳು ಸೇರಿದಂತೆ ಧಾರ್ಮಿಕ ಶಿಕ್ಷಣ ಸಂಸ್ಥೆಗಳಿಹೆ ರಜೆ ಅನ್ವಯಿಸುತ್ತದೆ.
ಪೂರ್ವ ನಿಗದಿಯಾಗಿದ್ದ ವಿಶ್ವವಿದ್ಯಾಲಯ/ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

