HEALTH TIPS

ಪತ್ನಿ, ಸಹೋದರಿಯ 9 ತಿಂಗಳ ಬಳಿಕ ಭೇಟಿಯಾದ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಅದಿಯಾಲ ಜೈಲಿನಲ್ಲಿ ತಮ್ಮ ಪತ್ನಿ ಹಾಗೂ ಸಹೋದರಿಯನ್ನು 9 ತಿಂಗಳ ನಂತರ ಭೇಟಿಯಾಗಿದ್ದಾರೆ. 


ಇಮ್ರಾನ್ ಖಾನ್ ಭೇಟಿಗೆ ಇದ್ದ ನಿರ್ಬಂಧವನ್ನು ಸಡಿಲಗೊಳಿಸಿ, ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಈ ಭೇಟಿ ನಡೆದಿದೆ.

ಕಳೆದ ಮೂರು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದು, ತೀವ್ರ ಮಾನಸಿಕ ಒತ್ತಡದಿಂದ ಬಳಲುತ್ತಿರುವ ಖಾನ್ ಅವರ ಆರೋಗ್ಯದ ಕುರಿತು ಆತಂಕ ವ್ಯಕ್ತವಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇಮ್ರಾನ್ ಅವರ ಸಹೋದರಿ ನೊರೀನ್ ಬೇಗಂ ಅವರು ಸುಮಾರು 15 ನಿಮಿಷ ಭೇಟಿಯಾಗಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿ, ಕಾನೂನು ವಿಷಯಗಳ ಬಗ್ಗೆ ಚರ್ಚಿಸಿದರು. ಇಲ್ಲಿನ ಖಾಸಗಿ ಆಸ್ಪತ್ರೆಗೆ ಇಮ್ರಾನ್ ಅವರನ್ನು ಸ್ಥಳಾಂತರಿಸಲಾಗುವುದು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ ಎಂದು 'ಎಕ್ಸ್‌ಪ್ರೆಸ್ ಟ್ರಿಬ್ಯೂನ್' ಪತ್ರಿಕೆ ವರದಿ ಮಾಡಿದೆ

ಮೂವರು ನ್ಯಾಯಮೂರ್ತಿಗಳ ಪೀಠವು ಖಾನ್ ಅವರಿಗೆ ಕುಟುಂಬ ಸದಸ್ಯರನ್ನು ಭೇಟಿಯಾಗಲು ಮತ್ತು ದೂರವಾಣಿ ಕರೆ ಮಾಡಲು ಅವಕಾಶ ನೀಡುವಂತೆ ಜೈಲು ಅಧಿಕಾರಿಗಳಿಗೆ ಆದೇಶಿಸಿದೆ.

ಇಮ್ರಾನ್ ಖಾನ್ ಬಂಧಿಯಾಗಿರುವ ಕಾರಾಗೃಹದ ಮೇಲೆ ದಾಳಿ ನಡೆಯುವ ಸಾಧ್ಯತೆಯಿದೆ ಎಂಬ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ಖಾನ್ ಭೇಟಿಗೆ ನಿರ್ಬಂಧ ವಿಧಿಸಿತ್ತು.

ಇಮ್ರಾನ್ ಖಾನ್ ಅವರು ತಮ್ಮ ಪತ್ನಿ ಬುಷ್ರಾ ಬೀಬಿ ಹಾಗೂ ಮಗಳನ್ನು ಭೇಟಿಯಾಗಿದ್ದು ಸುಮಾರು 30 ನಿಮಿಷ ಮಾತುಕತೆ ನಡೆಸಿದರು ಎಂದು ವರದಿಯಾಗಿದೆ.

ಸ್ವಾಗತ: ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ವಿಳಂಬವಿಲ್ಲದೆ ಅದನ್ನು ಜಾರಿಗೊಳಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries