HEALTH TIPS

9 ರಂದು ಸಿರಿಬಾಗಿಲು ಪ್ರತಿಷ್ಠಾನದಿಂದ ಯಕ್ಷಗಾನ ಮಹಿಳಾ ಕಲಾವಿದರುಗಳ ಸಮಾವೇಶ: ಚಿಂತನ- ಮಂಥನ

ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ಯಕ್ಷಗಾನ ಕಲೆಯ ದೀಪಕ್ಕೆ ತೈಲಧಾರೆಗಳಾಗೋಣ....!ಎಂಬ ಶೀರ್ಷಿಕೆಯ ಸರಣಿ ಕಾರ್ಯಕ್ರಮದನ್ವಯ ಯಕ್ಷಗಾನ ಮಹಿಳಾ ಕಲಾವಿದರುಗಳ ಸಮಾವೇಶ,  ವಿಶೇಷ 'ಚಿಂತನ- ಮಂಥನ' ಕಾರ್ಯಕ್ರಮ ಆ. 9ರಂದು ಬೆಳಗ್ಗೆ 10ಕ್ಕೆ ಪ್ರತಿಷ್ಠಾನದ ಶ್ರೀ ಕೇಶವಾನಂದ ಭಾರತಿ ಸ್ಮೃತಿ ಮಂದಿರದಲ್ಲಿ ಜರುಗಲಿರುವುದು. 


ಶಕುಂತಲಾ ರಮಾನಂದ ಭಟ್ ಇಡ್ಯಾ ಸುರತ್ಕಲ್ ಸಮಾರಂಭ ಉದ್ಘಾಟಿಸುವರು. ಕಾಸರಗೋಡಿನ ಹಿರಿಯ ಕಲಾವಿದೆ ವಿಶ್ರಾಂತ ಪ್ರಾಧ್ಯಾಪಕಿ  ಜಯಲಕ್ಷ್ಮಿ ಕಾರಂತ ಮಂಗಲ್ಪಾಡಿ ಅಧ್ಯಕ್ಷತೆ ವಹಿಸುವರು. ಉಷಾ ಶ್ರೀಧರ ಭಂಡಾರಿ ಪುತ್ತೂರು, ಕರ್ನಾಟಕ ಯಕ್ಷಗಾನ ಅಕಾಡೆಮಿಯ ನಿಕಟ ಪೂರ್ವ ಸದಸ್ಯೆ ನಿರ್ಮಲ ಹೆಗಡೆ ಶಿರಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 

ಕಾರ್ಯಕ್ರಮದ ಅಂಗವಾಗಿ ವಿಶೇಷ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಯಕ್ಷಗಾನದ ಭವಿಷ್ಯ, ಯಕ್ಷಗಾನದಲ್ಲಿ ಮಹಿಳೆಯರು: ಅವಕಾಶ, ಸವಾಲು ಮತ್ತು ನಾಯಕತ್ವ, ಮಹಿಳಾ ಶಕ್ತಿ ಮತ್ತು ಯಕ್ಷಗಾನದ ಮುಂದಿನ ಪೀಳಿಗೆ, ಯಕ್ಷಗಾನದ ಬೆಳವಣಿಗೆಯಲ್ಲಿ ಮಹಿಳೆಯರ ಪೂರಕ ಪಾತ್ರ,  ಭವಿಷ್ಯದ ಯಕ್ಷಗಾನ: ಮಹಿಳೆಯರ ದೃಷ್ಟಿ ಮತ್ತು ದಿಕ್ಕು"", ಮುಂತಾದ ವಿಷಯಗಳಲ್ಲಿ  ಜಯಂತಿ ಎಸ್ ಹೊಳ್ಳ  ಕೃಷ್ಣಾಪುರ,  ಲಲಿತಾ ಭಟ್ ಕುಳಾಯಿ,  ನಿರ್ಮಲ ಹೆಗಡೆ ಶಿರಸಿ,  ಪದ್ಮ ಆಚಾರ್ ಪುತ್ತೂರು,  ವೃಂದಾ ಕೊನ್ನಾರ್ ಮಾತನಾಡುವರು.  ಮಧ್ಯಾಹ್ನ 3ಕ್ಕೆ ನಡೆಯುವ ಸಮರೋಪ ಸಮಾರಂಭದಲ್ಲಿ ಯಕ್ಷಗಾನದ ಹಿರಿಯ ಮಹಿಳಾ ಕಲಾವಿದೆ ಪೂರ್ಣಿಮಾ ಯತೀಶ್ ರೈ ಸುರತ್ಕಲ್ ಹಾಗೂ    ಕೃತಿ ಪುರಪ್ಪೆಮನೆ ಸಾಗರ ಭಾಗವಹಿಸಲಿದ್ದಾರೆ. ನೂರಕ್ಕೂ ಹೆಚ್ಚಿನ ಮಹಿಳಾ ಕಲಾವಿದರು ಸಂವಾದದಲ್ಲಿ ಪಾಲ್ಗೊಳ್ಳುವರು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries