HEALTH TIPS

ಪಶ್ಚಿಮ ಏಷ್ಯಾ ಸಂಘರ್ಷ, ಮುಕ್ತ ವ್ಯಾಪಾರ ಒಪ್ಪಂದ ಕುರಿತು ಮೋದಿ-ನೆತನ್ಯಾಹು ಚರ್ಚೆ

ನವದೆಹಲಿ: ಪಶ್ಚಿಮ ಏಷ್ಯಾದ ಸದ್ಯದ ಪರಿಸ್ಥಿತಿ ಸೇರಿದಂತೆ ಮುಕ್ತ ವ್ಯಾಪಾರ ಒಪ್ಪಂದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆ. 


'ಉಭಯ ನಾಯಕರು ಭಾರತ ಮತ್ತು ಇಸ್ರೇಲ್ ನಡುವಿನ 'ವಿಶೇಷ ಕಾರ್ಯತಂತ್ರದ ಪಾಲುದಾರಿಕೆ'ಯಲ್ಲಿ ಆಗಿರುವ ಪ್ರಗತಿಯನ್ನು ಪರಾಮರ್ಶಿಸಿದರು.

ಅಲ್ಲದೆ, ಎರಡೂ ದೇಶಗಳ ಪರಸ್ಪರ ಹಿತಾಸಕ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆ ಪುನರುಚ್ಚರಿಸಿದರು' ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

ಫೆಬ್ರುವರಿ 26ರಂದು ಇಸ್ರೇಲ್‌ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಅವರು ಬೆಂಜಮಿನ್‌ ನೆತನ್ಯಾಹು ಅವರ ಜತೆ ಮಹತ್ವದ ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

ಈ ವೇಳೆ ವ್ಯಾಪಾರ, ಕೃಷಿ, ಸೈಬರ್‌ಸ್ಪೇಸ್‌, ಡಿಜಿಟಲ್‌ ಪಾವತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸಲು ಉಭಯ ದೇಶಗಳ ನಡುವೆ ಹಲವು ಒಪ್ಪಂದಗಳು ಏರ್ಪಟ್ಟಿದ್ದವು. ಎರಡೂ ದೇಶಗಳು ವಿಶೇಷ ಕಾರ್ಯ ತಂತ್ರದ ಪಾಲುದಾರಿಕೆ ವೃದ್ಧಿಸುವ ಕುರಿತು ಬದ್ಧತೆ ತೋರಿದ್ದವು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries