HEALTH TIPS

ಬಿಜೆಪಿ ವತಿಯಿಂದ ಓಣಂ ಕಿಟ್ ವಿತರಣೆ

ಬದಿಯಡ್ಕ: ಬಿಜೆಪಿ ಬದಿಯಡ್ಕ ಮಂಡಲದ 5ನೇ ವಾರ್ಡ್ ಸಮಿತಿ ನೇತೃತ್ವದಲ್ಲಿ ಸುಮಾರು 60 ಕುಟುಂಬಗಳಿಗೆ ಓಣಂ ಕಿಟ್‍ಗಳನ್ನು ವಿತರಿಸಲಾಯಿತು. ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿದರು.


ಈ ಸಂದರ್ಭ ಮಾತನಾಡಿದ ಅವರು, ಕೇರಳದ ಹಳ್ಳಿಗಳೂ ನಗರೀಕರಣದನ್ವಯ ಬದಲಾಗುತ್ತಿದ್ದಂತೆ ಕುಟುಂಬ ವ್ಯವಸ್ಥೆಯ ನಡುವಿನ ಬಾಂಧವ್ಯ ದೂರಾಗುತ್ತಿರುವುದು ಆತಂಕಕಾರಿ.  ಓಣಂನಂತಹ ಹಬ್ಬಗಳ ಸಂದರ್ಭಗಳು ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗುವ ವೇದಿಕೆಯಾಗಬೇಕು ಎಂದು ತಿಳಿಸಿದರು.

ಬೂತ್ ಸಮಿತಿ ಅಧ್ಯಕ್ಷ ಸತ್ಯಗೋಪಾಲ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಆರ್. ಸುನಿಲ್, ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ ನಾರಂಪಾಡಿ ಹಾಗೂ ಬದಿಯಡ್ಕ ಮಂಡಲ ಅಧ್ಯಕ್ಷ ಎಂ. ಗೋಪಾಲಕೃಷ್ಣನ್ ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries