HEALTH TIPS

ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸಡಗರದ ನಾಗರಪಂಚಮಿ

ಬದಿಯಡ್ಕ: ಪವಿತ್ರ ನಾಗರಪಂಚಮಿಯ ಪ್ರಯುಕ್ತ ನೀರ್ಚಾಲು ಬೇಳ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳು ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು  ಶ್ರದ್ಧಾ-ಭಕ್ತಿಯಿಂದ ಜರುಗಿದವು. ಈ ಶುಭ ಸಂದಭದಲ್ಲಿ ಬೆಳಿಗ್ಗೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ನಾಗದೇವರ ಕೃಪೆಗೆ ಪಾತ್ರರಾದರು. 

ನಾಗರಪಂಚಮಿ ಅಂಗವಾಗಿ ಬೆಳಿಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಮತ್ತು ನಾಗದೇವರಿಗೆ ವಿಶೇಷ ಅಭಿಷೇಕ, ತನು ತರ್ಪಣ, ಪಂಚಾಮೃತ ಅಭಿಷೇಕ ಹಾಗೂ ನಾಗತಂಬಿಲ ಸೇವೆಗಳನ್ನು ನೆರವೇರಿಸಲಾಯಿತು. ಕ್ಷೇತ್ರದ ಅರ್ಚಕರ ಪೌರೋಹಿತ್ಯದಲ್ಲಿ ನಡೆದ ಮಹಾಪೂಜೆಯ ಬಳಿಕ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು. ದಿನವಿಡೀ ದೇವಸ್ಥಾನದ ಆವರಣದಲ್ಲಿ ಭಕ್ತರ ದಂಡೇ ಕಂಡುಬಂತು. ನಾಗದೋಷ ಪರಿಹಾರ ಹಾಗೂ ಸಕಲ ಅಭೀಷ್ಟ ಸಿದ್ಧಿಗಾಗಿ ದೂರದೂರುಗಳಿಂದ ಆಗಮಿಸಿದ್ದ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries