HEALTH TIPS

'ಧ್ವನಿ ಕೊಟ್ಟ ದಣಿ' ಪ್ರತಿಷ್ಠಿತ ಪ್ರಶಸ್ತಿಗೆ ಗಡಿನಾಡ ಕನ್ನಡಿಗನ ಆಯ್ಕೆ

ಕಾಸರಗೋಡು: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನದ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ 'ಧ್ವನಿ ಕೊಟ್ಟ ದಣಿ'ಪ್ರಶಸ್ತಿಗೆ ಗಡಿನಾಡ ಕನ್ನಡಿಗ ಹಾಗೂ ಕನ್ನಡ ಭವನದ ರೂವಾರಿ ಡಾ. ವಾಮನ್ ರಾವ್ ಬೇಕಲ್ ಅವರು ಆಯ್ಕೆಯಾಗಿದ್ದಾರೆ.


ಸಾಹಿತ್ಯ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಗಣ್ಯರನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಬಾರಿ ಗಡಿನಾಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕøತಿಯ ಉಳಿವು ಮತ್ತು ಬೆಳವಣಿಗೆಗೆ ಡಾ. ವಾಮನ್ ರಾವ್ ಬೇಕಲ್ ಅವರು ಸಲ್ಲಿಸಿರುವ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ಆ.26ರಂದು ಸಂಜೆ 4.30ಕ್ಕೆ ಮೈಸೂರಿನ ಜೆ.ಎಲ್.ಬಿ. ರಸ್ತೆಯಲ್ಲಿರುವ ದಿ ಇನ್‍ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್ ಸಭಾಂಗಣದಲ್ಲಿ ನಡೆಯಲಿದೆ. ಅನ್ವೇಷಣಾ ಸೇವಾ ಟ್ರಸ್ಟ್ (ರಿ.), ಕರ್ನಾಟಕ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಟ್ರಸ್ಟ್‍ನ ಅಧ್ಯಕ್ಷ, ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಎಂ.ಜಿ.ಆರ್. ಅರಸು ಅವರ ನೇತೃತ್ವದಲ್ಲಿ ಸಮಾರಂಭ ಜರುಗಲಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries