HEALTH TIPS

ಪ್ರಧಾನಿ ಮೋದಿಗೆ ಉಜ್ಬೇಕಿಸ್ತಾನದ ಅತ್ಯುನ್ನತ ಗೌರವ

ತಾಷ್ಕೆಂಟ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಉಜ್ಬೇಕಿಸ್ತಾನದ ಅತ್ಯುನ್ನತ ಮತ್ತು ಪ್ರತಿಷ್ಠಿತ 'ಒಲಿ ದರಾಜಲಿ ದೋ'ಸ್ಟ್ಲಿಕ್' ((Oliy Darajali Do'stlik) ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.


ಉಜ್ಬೇಕಿಸ್ತಾನ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರು ಈ ಪ್ರಶಸ್ತಿಯನ್ನು ಪ್ರಧಾನಿ ಮೋದಿಯವರಿಗೆ ಪ್ರದಾನ ಮಾಡಿದರು.

ವ್ಯಾಪಾರ, ಹಸಿರು ಇಂಧನ ಮತ್ತು ಸಂಪರ್ಕ ವೃದ್ಧಿ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಉಭಯ ದೇಶಗಳ ಬಾಂಧವ್ಯವನ್ನು ಬಲಪಡಿಸಲು ಪ್ರಧಾನಿ ಮೋದಿ ಅವರು ಎರಡು ದಿನಗಳ ಉಜ್ಬೇಕಿಸ್ತಾನ್ ಪ್ರವಾಸ ಕೈಗೊಂಡಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಪ್ರಧಾನಿ, 'ಈ ಗೌರವ ಸ್ವೀಕರಿಸುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ. ಇದು ನನ್ನ ವೈಯಕ್ತಿಕ ಗೌರವವಲ್ಲ, ಬದಲಾಗಿ 140 ಕೋಟಿ ಭಾರತೀಯರಿಗೆ ಸಂದ ಗೌರವ. ಇದನ್ನು ಭಾರತ ಮತ್ತು ಉಜ್ಬೇಕಿಸ್ತಾನ ನಡುವಿನ ಶತಮಾನಗಳಷ್ಟು ಹಳೆಯ ಸ್ನೇಹಕ್ಕೆ ಸಮರ್ಪಿಸುತ್ತೇನೆ' ಎಂದು ತಿಳಿಸಿದ್ದಾರೆ.

'ದೋಸ್ತ್‌ಲಿಕ್' ಎಂದರೆ ಗೆಳೆತನ ಅಥವಾ ಸ್ನೇಹ ಎಂದರ್ಥ.

ಉಜ್ಬೇಕಿಸ್ತಾನ ಪ್ರವಾಸದ ನಂತರ ಪ್ರಧಾನಿ ಮೋದಿ ಅವರು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ನಡೆಯಲಿರುವ 26ನೇ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಕಿರ್ಗಿಜ್‌ಸ್ತಾನಕ್ಕೆ ಪ್ರಯಾಣಿಸಲಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries