ಉಪ್ಪಳ: ವಿಪರೀತ ಮಳೆಯಿಂದಾಗಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದ್ದು, ಇಂತಹ ಸಂದರ್ಭಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಾಗರೂಕತೆಯಿಂದ ಜನರಿಗೆ ಅಗತ್ಯಗಳಿಗೆ ಸ್ಪಂದಿಸಲು ಸಿದ್ಧರಾಗಿರಬೇಕೆಂದು ಜಿಲ್ಲಾ ಪಂಚಾಯತಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸೋಮಶೇಖರ ಜೆ.ಎಸ್. ಕರೆ ನೀಡಿದ್ದಾರೆ.
ಬಾಯಾರಿನ ಯುವಕ ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿ ಬಾಯಾರುಪದವಿನಲ್ಲಿ ಸ್ಥಾಪಿಸಿದ ಪಕ್ಷದ ನೂತನ ಧ್ವಜಸ್ತಂಭದಲ್ಲಿ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು.
ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಸಂತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ಮೋಹನ ರೈ, ಮುಖಂಡರಾದ ನಾರಾಯಣ ಏದಾರ್, ಸಚ್ಚಿದಾನಂದ ರೈ, ಹನೀಫ ಮೇರ್ಕಳ, ಅಬ್ದುಲ್ಲ ಹಾಜಿ, ಗಂಗಾಧರ ನಾಯ್ಕ್, ಸಿಬಿ ಕಯ್ಯಾರ್, ಅಂದುಂಞÂ ಹಾಜಿ, ರಾಣಿ ಟೀಚರ್, ರಾಶಿಕ್ ಪೈವಳಿಕೆ ಉಪಸ್ಥಿತರಿದ್ದರು. ಶಾಜಿ ಸ್ವಾಗತಿಸಿ, ಶಿವರಾಮ ಶೆಟ್ಟಿ ವಂದಿಸಿದರು.

.jpg)
