HEALTH TIPS

ಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ ಮಿರ್ಜಾ ಫಕ್ರುಲ್ ಇಸ್ಲಾಮ್ ಆಲಂಗೀರ್ ಆಯ್ಕೆ

ಢಾಕಾ: ಬಾಂಗ್ಲಾದೇಶದ ಅಧ್ಯಕ್ಷೀಯ ಚುನಾವಣೆಯಲ್ಲಿ ಆಡಳಿತಾರೂಢ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯು (ಬಿಎನ್‌ಪಿ) ಪಕ್ಷದ ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಇಸ್ಲಾಮ್‌ ಆಲಂಗೀರ್ ಅವರು ದೇಶದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.


ಮೊಹಮ್ಮದ್ ಶಹಾಬುದ್ದಿನ್ ಅವರು ಅನಾರೋಗ್ಯ ಕಾರಣ ನೀಡಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಜುಲೈ 24ರಂದು ರಾಜೀನಾಮೆ ನೀಡಿದ್ದರು.

ಇಂದು ಅಧ್ಯಕ್ಷೀಯ ಚುನಾವಣೆ ನಡೆದಿದ್ದು, ಬಾಂಗ್ಲಾದ ಸಂಸತ್ತು ಮಿರ್ಜಾ ಫಕ್ರುಲ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

ಬಿಎನ್‌ಪಿ ಅಧ್ಯಕ್ಷ ಹಾಗೂ ಪ್ರಧಾನಿ ತಾರಿಖ್‌ ರೆಹಮಾನ್ ಅವರ ನೇತೃತ್ವದಲ್ಲಿ ಈಚೆಗೆ ನಡೆದ ಸಭೆಯಲ್ಲಿ 78 ವರ್ಷದ ಮಿರ್ಜಾ ಫಕ್ರುಲ್ ಅವರನ್ನು ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿತ್ತು.

ಪ್ರಮುಖ ವಿರೋಧ ಪಕ್ಷ ಜಮಾತ್- ಎ- ಇಸ್ಲಾಮಿ ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ಲಿಬರಲ್ ಡೆಮಾಕ್ರಟಿಕ್ ಪಾರ್ಟಿಯ (ಎಲ್‌ಡಿಪಿ) ಮುಖ್ಯಸ್ಥ ಓಲಿ ಅಹ್ಮದ್ ಅವರನ್ನು ಕಣಕ್ಕಿಳಿಸಿತ್ತು.

ಆಲಂಗೀರ್ ಅವರು 255 ಮತಗಳನ್ನು ಪಡೆದರೆ, ಒಲಿ ಅಹ್ಮದ್ 88 ಮತಗಳನ್ನು ಪಡೆದಿದ್ದಾರೆ.

ಒಟ್ಟು 349 ನೋಂದಾಯಿತ ಪ್ರತಿನಿಧಿಗಳ ಪೈಕಿ 343 ಮಂದಿ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಆರು ಮಂದಿ ಮತದಾನದಿಂದ ದೂರು ಉಳಿದಿದ್ದಾರೆ.

ನೂತನ ಅಧ್ಯಕ್ಷರು ಶುಕ್ರವಾರ ಸಂಜೆ ಬಂಗಾಭವನದ ದರ್ಬಾರ್ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

1991ರ ನಂತರ ಬಾಂಗ್ಲಾದೇಶದಲ್ಲಿ ನಡೆದ ಮೊದಲ ಅಧ್ಯಕ್ಷೀಯ ಚುನಾವಣೆ ಇದಾಗಿದೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries