ಕಾಸರಗೋಡು: ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ನೇತೃತ್ವದಲ್ಲಿ ರಾಮಾಯಣ ಸತ್ಸಂಗ ಕಾರ್ಯಕ್ರಮ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರಗಿತು. ಮೂರನೇ ದಿನದ ಕಾರ್ಯಕ್ರಮವನ್ನು ಹಿರಿಯ ವೈದ್ಯ ಹಾಗೂ ಯಕ್ಷಗಾನ ಅರ್ಥದಾರಿಯಾದ ಡಾ. ಕೆ.ಎನ್.ಬಲ್ಲಾಳ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭ ಲಕ್ಷ್ಮಣೋಜಿ ರಾವ್ ಬಹುಮಾನ್ ಪಿಲಿಕುಂಜೆ, ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಡಾ. ಕೆ.ಎನ್.ವೆಂಕಟ್ರಮಣ ಹೊಳ್ಳ, ವಿಎಚ್‍ಪಿ ಹಿರಿಯ ಕಾರ್ಯಕರ್ತ ಎ.ಟಿ.ನಾಯಕ್, ಉಪಾಧ್ಯಕ್ಷ ಗುಣಪಾಲ ಅಮೈ, ಕಾರ್ಯದರ್ಶಿ ಕಿಶೋರ್ ಎಸ್.ವಿ.ಟಿ, ಲಕ್ಷ್ಮೀಕಾಂತ ನೆಲ್ಲಿಕುಂಜೆ ಉಪಸ್ಥಿತರಿದ್ದರು. ವಿಎಚ್ ಪಿ ಪ್ರಖಂಡ ಅಧ್ಯಕ್ಷ ಗುರುಪ್ರಸಾದ್ ಕೋಟೆಕಣಿ ಸ್ವಾಗತಿಸಿದರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಕೆ.ಎನ್. ರಾಮಕೃಷ್ಣ ಹೊಳ್ಳ ವಂದಿಸಿದರು. ಕುತ್ಯಾಳ ಶ್ರೀ ಗೋಪಾಲಕೃಷ್ಣ ಯಕ್ಷಗಾನ ತರಬೇತಿ ಕೇಂದ್ರ (ರಿ) ರಜತರಂಗ ಇವರಿಂದ ವಿಶೇಷ ಯಕ್ಷಗಾನ ತಾಳಮದ್ದಳೆ 'ಪಾದುಕಾ ಪ್ರದಾನ' ಪ್ರಸಂಗ ನಡೆಯಿತು.


