ನವದೆಹಲಿ: ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಯನ್ನು ಮತ್ತೆ ಅಲಹಾಬಾದ್ ಹೈಕೋರ್ಟ್‌ಗೆ ಕಳುಹಿಸುವ ಕುರಿತು ಸುಪ್ರೀಂ ಕೋರ್ಟ್ ಬುಧವಾರ ಸೂಚನೆ ನೀಡಿತು.
2025ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶ ಪ್ರಶ್ನಿಸಿ ಹಿಂದೂ ಗುಂಪೊಂದು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ಹಾಗೂ ನ್ಯಾ.ಸಂಜೀವ್ ಸಚ್‌ದೇವ್ ಅವರ ಪೀಠ ವಿಚಾರಣೆ ನಡೆಸುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಪರವಾಗಿರುವ ಎಲ್ಲಾ ಅರ್ಜಿದಾರರಿಗೂ ನೋಟಿಸ್ ನೀಡಲಾಗಿಲ್ಲ ಎಂಬುದುನ್ನು ಪೀಠ ಗಮನಿಸಿದೆ.
ಹಿಂದೂಗಳನ್ನು ಪ್ರತಿನಿಧಿಸಿ ಎರಡು ಗುಂಪುಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಈ ಪೈಕಿ ಯಾವುದು ಪ್ರಮುಖ ಪ್ರಕರಣ ಎಂಬುದು ಇತ್ಯರ್ಥವಾಗದ ಕಾರಣ ಈ ಗೊಂದಲ ಮುಂದುವರಿದಿದೆ ಎಂಬುದನ್ನು ನ್ಯಾಯಪೀಠ ಗಮನಿಸಿ, ಅರ್ಜಿಯನ್ನು ಹೈಕೋರ್ಟ್‌ಗೆ ಹಿಂದಿರುಗಿಸಲು ಚಿಂತಿಸಿದೆ. ಜತೆಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ನಿಗದಿ ಪಡಿಸಿದೆ.

