ಮಂಜೇಶ್ವರ: ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು, ಹೆತ್ತವರು ಹಾಗೂ ಊರವರಿಂದ ಆಕರ್ಷಕ ಮೆರವಣಿಗೆ ನಡೆಯಿತು.
ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಧ್ವಜಾರೋಹಣ ನಡೆಸಿದರು. ಶಾಲಾ ಪಿ.ಟಿ.ಎ. ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯೆ ಶರ್ಮಿಳ ಎಂ ಶೆಟ್ಟಿ ಚಾರ್ಲ, ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಪಿ.ಆರ್. ಶೆಟ್ಟಿ ಪೆÇಯ್ಯೇಲು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಬಾಲಕೃಷ್ಣ ಶೆಟ್ಟಿ ಪೆÇಯ್ಯೇಲು, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ನಾರಾಯಣ ನೈಕ್ ನಡುಹಿತ್ಲು, ಮೀಂಜ ಸಿ.ಡಿ.ಎಸ್. ಚೇರ್ ಪರ್ಸನ್ ಪದ್ಮಜಾ ಕುಳೂರು ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ವೇತ ಕೇಮಜಲ್, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಕವಿತಾ ದೇರಂಬಳ ಉಪಸ್ಥಿತರಿದ್ದರು.
ಈ ಸಂದರ್ಭ ಸ್ವಾತಂತ್ರ್ಯೋತ್ಸವ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಶಿಕ್ಷಕಿ ನಯನ ಎಂ ಸ್ವಾಗತಿಸಿದರು. ಶಾಲಾ ಶಿಕ್ಷಕಿಯರಾದ ಸೌಮ್ಯ ಪಿ ಹಾಗೂ ಅಶ್ವಿನಿ ಎಂ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಶ್ವೇತ ಇ ವಂದಿಸಿದರು. ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರಗಿತು.



