HEALTH TIPS

ಕುಂಬ್ಡಾಜೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

ಬದಿಯಡ್ಕ: ಕುಂಬ್ಡಾಜೆ ಗ್ರಾಮ ಪಂಚಾಯಿತಿಯಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಇದರಂಗವಾಗಿ ನಡೆದ ಧ್ವಜಾರೋಹಣವನ್ನು ಕುಂಬ್ಡಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಾ ಎನ್. ನಿರ್ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪೂರ್ಣರೂಪದ ವಂದೇ ಮಾತರಂವನ್ನು ಹಾಡಲಾಯಿತು. 


ಈ ಸಂದರ್ಭದಲ್ಲಿಯೇ ನಡೆದ ವಿಶೇಷ ಗ್ರಾಮಸಭೆ ಸಭೆಯಲ್ಲಿ ಅಭಿವೃದ್ಧಿ ಯೋಜನೆಗಳು ಮತ್ತು ಸಮುದಾಯ ಕಲ್ಯಾಣ ವಿಷಯಗಳ ಕುರಿತು ಚರ್ಚೆ ನಡೆಯಿತು. ಸಾರ್ವಜನಿಕರೊಂದಿಗೆ ಸಂವಾದ ಹಾಗೂ ಮುಂಬರುವ ಸ್ಥಳೀಯಾಡಳಿತ ಯೋಜನೆಗಳ ಬಗ್ಗೆಯೂ ಚರ್ಚಿಸಲಾಯಿತು. ಮಾಹಿತಿಯನ್ನು

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ನಯನ,  ಪಂಚಾಯಿತಿ ಕಲ್ಯಾಣ ಸ್ಥಾಯಿ ಸಮಿತಿ ಸಮಿತಿ ಅಧ್ಯಕ್ಷ ಅಬೂಬಕರ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರಿಯಾಂಕ ಎ.ಸಿ., ಪಂಚಾಯಿತಿ ಸದಸ್ಯರಾದ ಸೌಭಾಗ್ಯಲಕ್ಷ್ಮೀ, ಕೊರಗಪ್ಪ ಬೆಳ್ಳಿಗೆ, ಮಹೇಶ್ ಅಜ್ಜಿಮೂಲೆ, ಎಸ್.ಮೊಹಮ್ಮದ್ ಕುಂಞÂ, ಬಿ.ಟಿ.ಅಬ್ದುಲ್ಲ ಕುಂಞÂ, ಗೀತಾ ಡಿ., ಬಬಿತಾ ರೇಶ್ಮಾ ಮುಂತಾದವರು ಶುಭಾಶಂಸನೆಗೈದರು. ಕಾರ್ಯಕ್ರಮದಲ್ಲಿ ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದರು. ನಟರಾಜ ಶರ್ಮಾ ಅವರು ವಂದೇ ಮಾತರಂ ಅನ್ನು ಪೂರ್ಣ ರೂಪದಲ್ಲಿ ಹಾಡಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries