ಪೆರ್ಲ: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಪೆರ್ಲ ಘಟಕ ವತಿಯಿಂದ ಆ. 30ರಂದು ಪೆರ್ಲ ವ್ಯಾಪಾರಿ ಭವನದಲ್ಲಿ ನಡೆಯಲಿರುವ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಅಂಗವಾಗಿ ಸಮಾಜ ಬಾಂಧವರಿಗಾಗಿ ವಿವಿಧ ಆಟೋಟ ಸ್ಪರ್ಧೆ ಆ. 23ರಂದು ಬೆಳಗ್ಗೆ 9 ಗಂಟೆಯಿಂದ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರಿ ಉಳ್ಳಾಲ್ತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಕೇರಳ ರಾಜ್ಯ ಕಬಡ್ಡಿ ತಂಡದ ಮಾಜಿ ಕ್ಯಾಪ್ಟನ್ ಗಣೇಶ್ ಕುಂಬಳೆ ಕ್ರೀಡೋತ್ಸವ ಉದ್ಘಾಟಿಸುವರು. ಎಲ್‍ಪಿ, ಯುಪಿ, ಪ್ರೌಢಶಾಲಾ ವಿಭಾಗ ಹಾಗೂ ಸಾರ್ವಜನಿಕ ವಿಭಾಗದಲ್ಲಿ ವಿವಿಧ ಕ್ರೀಡೆಗಳು ನಡೆಯಲಿರುವುದು.
ಆ. 30ರಂದು ಪೆರ್ಲ ವ್ಯಾಪಾರಿ ಭವನ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು.

