HEALTH TIPS

'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಪ್ರಧಾನಿ ಮೋದಿ ಕರೆ

ನವದೆಹಲಿ: 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ನಾಗರಿಕರು ಉತ್ಸಾಹದಿಂದ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ(ಆ.9) ಮನವಿ ಮಾಡಿದ್ದಾರೆ.


2022ರಲ್ಲಿ 'ಆಜಾದಿ ಕಾ ಅಮೃತ ಮಹೋತ್ಸವ'ದ ಅಡಿಯಲ್ಲಿ ಪ್ರಾರಂಭವಾದ 'ಹರ್ ಘರ್ ತಿರಂಗಾ' ಅಭಿಯಾನವು ನಂತರದ ವರ್ಷಗಳ ಸ್ವಾತಂತ್ರ್ಯ ದಿನಾಚರಣೆಯಂದು ಮುಂದುವರೆದಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, 'ತ್ರಿವರ್ಣ ಧ್ವಜವು ನಮ್ಮ ಹೆಮ್ಮೆ. ದೇಶಕ್ಕಾಗಿ ಕೊಡುಗೆ ನೀಡಲು ಇದು ನಿರಂತರ ಪ್ರೇರಣೆಯಾಗಿದೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳೋಣ. ವಿಕಸಿತ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವ ನಮ್ಮ ಸಾಮೂಹಿಕ ಸಂಕಲ್ಪವನ್ನು ಪುನರುಜ್ಜೀವನಗೊಳಿಸೋಣ' ಎಂದಿದ್ದಾರೆ.

2026ರ 'ಹರ್ ಘರ್ ತಿರಂಗಾ' ಅಭಿಯಾನಕ್ಕೆ ಆಗಸ್ಟ್ 6ರಂದು ಚಾಲನೆ ನೀಡಲಾಗಿದ್ದು, ಆಗಸ್ಟ್ 9ರಿಂದ 17ರವರೆಗೆ ದೇಶದಾದ್ಯಂತ ಆಚರಿಸಲಾಗುತ್ತದೆ. ಈ ವೇಳೆ ನಾಗರಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಮತ್ತು ದೇಶಭಕ್ತಿ ಹಾಗೂ ರಾಷ್ಟ್ರೀಯ ಏಕತೆಯ ಭಾವನೆಯನ್ನು ಆಚರಿಸುವ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಉತ್ತೇಜಿಸಲಾಗುತ್ತದೆ.

Our Tricolour is our pride and a constant source of inspiration to always give our best for the nation. Let us participate enthusiastically in the #HarGharTiranga movement and renew our collective resolve to contribute towards building a Viksit Bharat. Glad that this year’s Show more
Ministry of Culture
@MinOfCultureGoI
For 150 years, the call of Vande Mataram has stirred the soul of a nation. This Independence Day, let that same spirit move through every street and every home as India comes together for Har Ghar Tiranga through Tiranga Yatras, Tiranga Rallies, Tiranga Concerts and mass singing

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries