ವಿಶ್ವಸಂಸ್ಥೆ (PTI): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಸರ್ಕಾರದ ವಿರುದ್ಧ ನಡೆಯುತ್ತಿರವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಯಂಟೊನಿಯೊ ಗುಟೆರಸ್, 'ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಜನರ ಮೇಲೆ ಸರ್ಕಾರದ ದಮನಕಾರಿ ಕ್ರಮಕ್ಕೆ ಹೊಣೆಗಾರಿಕೆ ನಿಗದಿ ಮಾಡಬೇಕು' ಎಂದಿದ್ದಾರೆ.
ಪಿಟಿಐ' ಸುದ್ದಿ ಸಂಸ್ಥೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. 'ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ವೋಲ್ಕರ್ ಟರ್ಕ್ ಅವರ ಮನವಿಯನ್ನು ಸರ್ಕಾರ ಪರಿಗಣಿಸುತ್ತದೆ ಎಂದು ನಂಬಿದ್ದೇವೆ' ಎಂದು ಗುಟೆರಸ್ ಅವರ ಉಪ ವಕ್ತಾರ ಫರ್ಹಾನ್ ಹಕ್ ಶುಕ್ರವಾರ ಹೇಳಿದ್ದರು.

