ಕುಂಬಳೆ: ಆಹಾರ ಸೇವಿಸುತ್ತಿದ್ದ ವೇಳೆ ಕುಸಿದುಬಿದ್ದ ಪರಿಣಾಮ ಕುಂಬಳೆ ಕಂಟಂಗೇರಡ್ಕ ಅಬ್ದುಲ್ಲ ಎಂಬವರ ಪುತ್ರ ಮುಬಾರಿಸ್ (18) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರಥಮ ವರ್ಷ ಪದವಿ ವಿದ್ಯಾರ್ಥಿಯಾಗಿದ್ದ ಇವರು, ಶನಿವಾರ ರಾತ್ರಿ ಮನೆಯಲ್ಲಿ ಆಹಾರ ಸೇವಿಸುತ್ತಿರುವ ಮಧ್ಯೆ ಕುಸಿದು ಬಿದ್ದಿದ್ದರು. ತಕ್ಷಣ ಇವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ತಲುಪಿಸಲಾಗಿತ್ತು. ಪರಿಸ್ಥಿತಿ ಗಂಭೀರವಾಗಿ ಮುಂದುವರಿದಿದ್ದ ಹಿನ್ನೆಲೆಯಲ್ಲಿ ಉನ್ನತ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ.
ಮಂಗಳೂರು ಶ್ರೀ ಶಾರದಾ ಕಾಲೇಜಿನ ಪ್ರಥಮ ವರ್ಷ ಪದವಿ ವಿದ್ಯಾರ್ಥಿಯಾಗಿದ್ದ ಮುಬಾರಿಸ್ ಎಂಎಸ್‍ಎಫ್ ಕುಂಬಳೆ ವಲಯ ಸಮಿತಿ ಸದಸ್ಯನಾಗಿದ್ದರು.


