ಮಂಜೇಶ್ವರ: ಓಣಂ ಸ್ಪೆಷಲ್ ಡ್ರೈವ್‍ನ ಅಂಗವಾಗಿ ಅಬಕಾರಿ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ವಿದೇಶಿ ಮದ್ಯ ಹಾಗೂ ಬಿಯರ್ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಬಂಧಿಸಲಾಗಿದೆ. ದುರ್ಗಿಪಳ್ಳಿ ನಿವಾಸಿ ಗಣೇಶ್ (43)ಬಂಧಿತ.
ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ ಸರ್ಕಲ್ ಇನ್ಸ್‍ಪೆಕ್ಟರ್ ಜಿ. ಕೃಷ್ಣ ಕುಮಾರ್ ಹಾಗೂ ಕುಂಬಳೆ ಅಬಕಾರಿ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಕಾರಿನಲ್ಲಿ ಸಾಗಿಸುತ್ತಿದ್ದ 133.92 ಲೀಟರ್ ಕರ್ನಾಟಕ ನಿರ್ಮಿತ ವಿದೇಶಿ ಮದ್ಯ ಹಾಗೂ 24 ಲೀಟರ್ ಬಿಯರ್ ವಶಪಡಿಸಿಕೊಳ್ಳಲಾಗಿದೆ.


