HEALTH TIPS

ದೇಶವನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸಲು ಎಲ್ಲರೂ ಕೈಜೋಡಿಸಬೇಕು: ಮೋದಿ

ನವದೆಹಲಿ: 'ದೇಶವನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸಲು ಹಾಗೂ ಯುವಕರಿಗೆ ಉತ್ತಮ ಭವಿಷ್ಯವನ್ನು ಕಟ್ಟಿಕೊಡಲು ಎಲ್ಲರೂ ಕೈಜೋಡಿಸಬೇಕು' ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.


ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, 'ನಶೆ ಮುಕ್ತ ಭಾರತ ಅಭಿಯಾನ' ಈಗಾಗಲೇ ಆರಂಭಗೊಂಡಿದೆ.

ಈ ಅಭಿಯಾನವು ದೇಶದಾದ್ಯಂತ ತಲುಪಬೇಕು. ಯುವಕರನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸಬೇಕು. ದೇಶದ ಪ್ರಗತಿಗೆ ಯುವಜನರ ಪಾತ್ರ ಮುಖ್ಯ' ಎಂದಿದ್ದಾರೆ.

2020ರ ಆಗಸ್ಟ್ 15 ರಂದು ಈ ಅಭಿಯಾನವನ್ನು ಆರಂಭಿಸಲಾಯಿತು. ಮಾದಕ ವ್ಯಸನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು. ಯುವಕರನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ' ಎಂದು ಹೇಳಿದ್ದಾರೆ.

ಸ್ವನಿಧಿ ಸಾಲ ಸೌಲಭ್ಯದ ಬಗ್ಗೆ ಉಲ್ಲೇಖಿಸಿದ ಅವರು, 'ಲಕ್ಷಾಂತರ ಮಹಿಳಾ ಬೀದಿ ಬದಿ ವ್ಯಾಪಾರಿಗಳಿಗೆ ಈ ಯೋಜನೆಯು ಸಹಕಾರಿಯಾಗಿದೆ. ಈ ಯೋಜನೆಯಡಿ ₹ 10 ಸಾವಿರ ಸಾಲ ಸಿಗುತ್ತಿದ್ದು, ಶೇ. 46 ರಷ್ಟು ಮಹಿಳೆಯರು ಇದರ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಪರಿಚಯಿಸಲಾದ ಈ ಯೋಜನೆಯನ್ನು 2030ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ' ಎಂದು ತಿಳಿಸಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries